ಲೇಖನಗಳು

ಸ್ಮರಣೆ: ಬುದ್ಧನ ನೆನಪಲ್ಲೊಂದು ಯಾನ….

ಗೌತಮ ಬುದ್ಧ (ಕ್ರಿ.ಪೂ 557-447) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ.

ಜನ್ಮ ದಿನಾಂಕ 563 BCE, ಲುಂಬಿನಿ
ಮರಣ:-483 BCE, ಖುಷಿನಗರ

ಹೆಸರುವಾಸಿಯಾದದ್ದು:-ಬೌದ್ಧಧರ್ಮದ ಸಂಸ್ಥಾಪಕ ಪೂರ್ವಾಧಿಕಾರಿ:-ಕಾಸಪ್ಪ ಬುದ್ಧ
ಉತ್ತರಾಧಿಕಾರಿ:-ಮೈತ್ರೇಯ ಬುದ್ಧ
ಪೋಷಕರು:- ಶುದ್ಧೋಧನ (ತಂದೆ), ಮಾಯದೇವಿ (ತಾಯಿ)

ಗೌತಮ ಬುದ್ಧನ ಹುಟ್ಟು ಸ್ಥಳ ಲುಂಬಿನಿ ಗ್ರಾಮ. ತಂದೆ ಶುದ್ಧೋಧನ ತಾಯಿ ಮಾಯಾದೇವಿ. ಮೊದಲ ಹೆಸರು ಸಿದ್ದಾರ್ಥ. ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡ ಬುದ್ಧನನ್ನು ಗೌತಮಿ ಎಂಬ ಸ್ತ್ರೀಯೊಬ್ಬಳು ಸಾಕುತ್ತಾಳೆ. ಆದುದರಿಂದ ಸಿದ್ದಾರ್ಥ ‘ಗೌತಮ’ನೆಂದು ಕರೆಯಲ್ಪಡುತ್ತಾನೆ. ತಂದೆ ಶುದ್ಧೋಧನ ಮಗ ಚಕ್ರವರ್ತಿಯಾಗಬೇಕೆಂಬ ಆಶಯದಿಂದ ಅವನಿಗೆ ದುಃಖದ ಸನ್ನಿವೇಶಗಳೇ ಕಾಣದಂತಹ ಕೃತಕ ವಾತಾವರಣವನ್ನು ಸೃಷ್ಟಿಸಿ, ಅವನನ್ನು ಬೆಳೆಸುತ್ತಾನೆ. ಯಶೋಧರೆ ಎಂಬ ಸುಂದರ ಕನ್ಯೆಯೊಂದಿಗೆ ಅವನ ವಿವಾಹವನ್ನು ಮಾಡುತ್ತಾನೆ. ಗೌತಮನಿಗೆ ‘ರಾಹುಲ’ ಎಂಬ ಮಗನು ಹುಟ್ಟುತ್ತಾನೆ. ಮಗುವಿಗೆ ವರ್ಷ ತುಂಬುವುದರೊಳಗೆ ಸಿದ್ದಾರ್ಥನಿಗೆ ದುಃಖದ ‘ದಿವ್ಯದರ್ಶನ’ವಾಗುತ್ತದೆ. ಇಡೀ ಜಗತ್ತಿನ ಘೋರ ದುಃಖವನ್ನು ಕಂಡು ಬೆಚ್ಚಿಬಿದ್ದ ಸಿದ್ದಾರ್ಥ, ಸೇವಕ ಚೆನ್ನನೊಡನೆ ಜಗವೆಲ್ಲಾ ಮಲಗಿರುವಾಗ ಬುದ್ದನಾಗಲೂ ಹೊರಟು, ದುಃಖಕ್ಕೆ ಶಾಶ್ವತ ಪರಿಹಾರವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಾನೆ.

ಮುಕ್ತಿ ಮಾರ್ಗ” ವಿಶ್ವದ ಪ್ರಸಿದ್ಧವಾಗಿರುವ ಧಮ್ಮ ಮಾರ್ಗವೇಂದರೆ, ಅದು ಬೌದ್ಧ ಧಮ್ಮ ಇದನ್ನು ಕಂಡುಹಿಡಿದ ಭಾರತದ ಸರಹದ್ದಿನಲ್ಲಿ ಜ್ನಾನ ಯೋಗಿ ಗೌತಮ ತನ್ನ ಜ್ನಾನೋದಯವನ್ನು ಪಡೆದ ಇದರಿಂದ ಇತನ್ನು ಬುದ್ಧನೆಂದು ಕರೆಯಲಾಗುತ್ತದೆ. ವಿವಿಧ ಪಂಥಗಳ ಗುರುಗಳ ಹತ್ತಿರ ಸತತವಾಗಿ 6ವರ್ಷಗಳ ಕಾಲ ಅವರು ಹೇಳಿದಂತೆ ದೇಹ ದಂಡನೆ ಮಾಡಿ ಇದರಿಂದ ಯಾವುದೇ ಪ್ರತಿ ಫಲ ಮತ್ತು ಶಾಂತಿ ಸಿಗದೆ ಅಂತಿಮವಾಗಿ ಪರಮ ಸತ್ಯ ಕಾಣಲು ಮುಂದಿನ 6 ವರ್ಷಗಳು ಬೋಧಿ ವೃಕ್ಷದ ಕೆಳಗೆ ನಿರಂತರ ಧ್ಯಾನ ತಪಸ್ಸು ಮಾಡುವುದರ ಮೂಲಕ ಪರಿಪೂರ್ಣ ಜ್ನಾನೋದಯ ಪಡೆದುಕೊಂಡನು. ಗೌತಮ ಬುದ್ಧರು ಮುಂದಿನ 45 ವರ್ಷಗಳು ನಿರಂತರವಾಗಿ ಧಮ್ಮೋಪದೇಶಗಳನ್ನು ಜನಸಾಮಾನ್ಯರಿಗೆ ನೀಡುವ ಮೂಲಕ ಮಾನವನ ದುಖ ನಿವಾರಣೆಗೆ ತ್ರಿಸರಣ ಬೋಧನೆ ಮಾಡಿದರು. ಈ ಮೂರು ಬೌದ್ಧ ಧಮ್ಮದ ಮೂಲ ಸಂಕೇತಗಳು. ಇವುಗಳನ್ನು ಪ್ರತಿಯೋಬ್ಬರ ಜೀವನ ಧ್ಯೇಯಗಳಾಗಿ ಒಪ್ಪಿಕೊಂಡು ಸಂತೋಷವಾಗಿರುವುದು. ಅವುಗಳೆಂದರೆ, ಬುದ್ಧಂ ಶರಣಂ ಗಚ್ಚಾಮಿ (ನಾನು ಬುದ್ಧನಿಗೆ ಶರಣಾಗುತ್ತೇನೆ.) ಧಮ್ಮಂ ಶರಣಂ ಗಚ್ಚಾಮಿ (ನಾನು ಧಮ್ಮಕ್ಕೆ ಶರಣಾಗುತ್ತೇನೆ.) ಸಂಘಂ ಶರಣಂ ಗಚ್ಚಾಮಿ (ನಾನು ಸಂಘಕ್ಕೆ ಶರಣಾಗುತ್ತೇನೆ.)

ಗಚ್ಚಾಮಿ ಎಂದರೆ, ಸತ್ಯದಿಂದ ಬೌದ್ಧ ಧಮ್ಮ ಸ್ವೀಕರಿಸುತ್ತೇನೆ ಎಂದು ಅರ್ಥೈಸುತ್ತದೆ. ಈ ಮೂರು ಶರಣ್ಯಗಳನ್ನು ಉಪಾಸಕರು ಮೂರು ಬಾರಿ ಉಚ್ಚರಿಸುವ ಮೂಲಕ ತಾವು ಬೌದ್ಧ ಧಮ್ಮಾಚಾರಿಗಳೆಂದು ಘೋಷಿಸುತ್ತಾರೆ.

ಚಿತ್ರ ರಂಜಿತಾ ಕಾರಂತ್

ಬುದ್ಧ: ಬುದ್ಧನು ದೇವರಲ್ಲ, ದೇವದೂತನೂ ಅಲ್ಲ, ಮತ್ತು ಈತನು ದೈವಸಂಭೂತನೂ ಅಲ್ಲ ಆದರೆ ತನ್ನ ಸ್ವಸಾಮರ್ಥ್ಯದಿಂದ , ಅತ್ಯುನ್ನತ ಜ್ಞಾನ ಪಡೆದು ಜಗತ್ತಿನ ಪರಮ ಸತ್ಯವನ್ನು ಬೋಧಿಸಿದ ಮಹಾಗುರು. ಮದ್ಯಮ ಮಾರ್ಗದ ಮೂಲಕ ಮೈತ್ರಿ, ಕರುಣೆ, ದಯೆ , ಸಮತೆ, ಪ್ರೀತಿ, ಅನುಕಂಪ, ಮತ್ತು ಜ್ಙಾನದೂಂದಿಗೆ ಅಷ್ಠಾಂಗ ಮಾರ್ಗಗಳನ್ನು ತೋರಿಸಿಕೊಟ್ಟರು. ಈ ಸತ್ಯ ವನ್ನು ನಾವು ಪರಿಪಾಲಿಸಿದರೆ ಸಮ್ಮ ಜೀವನದಲ್ಲಿ ಬುದ್ಧತ್ವವನ್ನು ಪಡೆಯಬಹುದು. ಧಮ್ಮ: ಬುದ್ಧರು ಧಮ್ಮವನ್ನು ಜೀವನ ಮಾರ್ಗವೆಂದು ಹೇಳಿದ್ದಾರೆ.

ಸಂಘ: ಬೌದ್ಧ ಸಂಘಗಳು ಬುದ್ಧನ ಕಾಲದಿಂದ ಸ್ಥಾಪಿಸಲ್ಪಟ್ಟಿದ್ದರೂ ಅವುಗಳಿಗೆ ನಿಜವಾದ ಮಾರ್ಗ ಸೂಚಿಯನ್ನು ಭಗವಾನ್ ಬುದ್ಧ ತಮ್ಮ ಬೋಧನೆಯ ಮಾರ್ಗದಿಂದ ತಿಳಿಸಿದರು. ಇಂತಹ ಭಿಕ್ಕು ಸಂಘಗಳು ಇಂದಿಗೂ ವಿಶ್ವದ್ಯಾಂತ ಸಂಘಟಿತವಾಗಿ ಬರ್ಮಾ, ಥೈಲ್ಯಾಂಡ್, ಶ್ರೀಲಂಕಾ, ಕ್ಯಾಂಬೋಡಿಯಾ, ಲಾವೋಸ್, ಚಿತ್ತಗಾಂಗ್, ಜಪಾನ್, ಚೀನಾ, ಟಿಬೆಟ್, ಇಂದಿಗೂ ತನ್ನ ಮೂಲಸ್ವರೂಪದಲ್ಲಿ ಸಂಘಟನೆ ಇವೆ. ಬೌದ್ಧ ಭಿಕ್ಕು ಮತ್ತು ಭಿಕ್ಕಿಣಿ ಸಂಘಗಳು ಅಮೆರಿಕಾ , ರಷ್ಯ, ಕ್ಯಾನಡ, ಪ್ರಾನ್ಸ್ ,ಜರ್ಮನ್ ರಾಷ್ಟ್ರಗಳಲ್ಲಿ ಧಮ್ಮದ ಉನ್ನತಿಗಾಗಿ ಸೇವೆ ಮಾಡುತ್ತಿವೆ.

– ಶ್ರವಣ್ ಕಾರಂತ್ ಕೆ
ಸುಪ್ರಭಾತ
ಶಕ್ತಿನಗರ ಮಂಗಳೂರು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಮನ ಮಂದಿರ: ಭಾವನೆಗಳ ಸಾಕಾರ ಓಂಕಾರ ಮಂತ್ರ

Upayuktha

ಕ್ರಾಂತಿಕಾರಿ ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ

Upayuktha

ಚಟದಿಂದ ಚಟ್ಟ ಹತ್ತಿಸುವ ಇ-ಸಿಗರೇಟ್ ನಿಷೇಧ ಸ್ವಾಗತಾರ್ಹ

Upayuktha