ಜಿಲ್ಲಾ ಸುದ್ದಿಗಳು

ಪತ್ರಕರ್ತರ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ: ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಳೆದ ಜನವರಿ 5 ರಂದು ಗ್ರಾಮ ವಾಸ್ತವ್ಯ ಮಾಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಇದಕ್ಕೆ ತಕ್ಷಣ ಸ್ಪಂದಿಸಿದ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಲವು ವರ್ಷಗಳ ಬೇಡಿಕೆಯಾಗಿದ್ದ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜನವರಿಯಲ್ಲಿ ಮಡಪ್ಪಾಡಿಯಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮವಾಸ್ತವ್ಯದಲ್ಲಿ ರಸ್ತೆ ಸಮಸ್ಯೆ, ನೆಟ್‌ವರ್ಕ್ ಮತ್ತಿತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿತ್ತು. ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಈಶ್ವರಪ್ಪರವನ್ನು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ನಿಯೋಗ ಭೇಡಿ ಮಾಡಿ ಮನವಿ ಸಲ್ಲಿಸಿದಾಗ ರಸ್ತೆಗೆ ಎರಡು ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿ ರಸ್ತೆಯ ಎಸ್ಟಿಮೇಟ್ ಮಾಡಿ ತಯಾರಿಸಿ ಸಲ್ಲಿಸಲು ಅಧಿಕಾರಿಗಳಿಗೆ ಅದೇಶ ನೀಡಿದ್ದಾರೆ.

ಪತ್ರಕರ್ತರ ಸಂಘದ ಪದಾಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಪರಿಶೀಲಿಸಿರುವುದಾಗಿ ಅವರು ಭರವಸೆ ನೀಡಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಹಾವೇರಿ: ಪೊಲೀಸರು, ಸರಕಾರಿ ವೈದ್ಯ ಸೇರಿ 50 ಮಂದಿಯಲ್ಲಿ ಕೋವಿಡ್ ಪಾಸಿಟಿವ್

Harshitha Harish

ಕೋಟ ಶ್ರೀನಿವಾಸ ಪೂಜಾರಿ- ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

Harshitha Harish

ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ. ಆನಂದ್ ವೀರಣ್ಣ ಶೆಟ್ಟಿ ನಿಧನ

Harshitha Harish