ಬೆಂಗಳೂರು : ಸ್ಯಾಂಡಲ್ ವುಡ್ ಸ್ಟಾರ್ ದಂಪತಿಗಳಾದ ಅಮೂಲ್ಯ , ಜಗದೀಶ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರ ಕ್ಕೆ 2.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕಾಗಿನ ನಿಧಿ ಸಮರ್ಪಣಾ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿದ್ದು ರಾಮಭಕ್ತರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಇದರಲ್ಲಿ ಪಾಲ್ಗೊಂಡು ಹಾಗೆ ನಟಿ ಅಮೂಲ್ಯ ದಂಪತಿಗಳು ಸಹ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ದಲ್ಲಿ ಫೋಟೋ ಶೇರ್ ಮಾಡಿದ ದಂಪತಿ “ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು.” ಎಂದು ಬರೆದಿದ್ದಾರೆ.
ನಟಿ ಅಮೂಲ್ಯ ಪತಿ ಜಗದೀಶ್ 1.5 ಲಕ್ಷ ಹಾಗೂ ಅವರ ತಂದೆ ಜಿ.ಎಸ್. ರಾಮಚಂದ್ರ ಅವರ ಹೆಸರಲ್ಲಿ 1 ಲಕ್ಷ ದೇಣಿಗೆ ನೀಡಲಾಗಿದೆ.
ಈ ಮೊದಲು ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್, ಹಿರಿಯ ನಟ ಜಗ್ಗೇಶ್, ತೆಲುಗು ಸ್ಟಾರ್ ನಟ ಪವನ್ ಕಲ್ಯಾಣ ಕೂಡ ಕರೆ ನೀಡಿದ್ದಾರೆ.