ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ ತನಿಖೆ ಮುಂದುವರಿದ ಸಿಸಿಬಿ ಪೊಲೀಸರು, ಮತ್ತೋರ್ವ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧನ ಮಾಡಿದ್ದಾರೆ.
ವಿದೇಶಿ ಪ್ರಜೆ ಚಿಡಿಬೈರ್ ಆ್ಯಮರೋಸ್ ಬಂಧಿತ ಆರೋಪಿ. ಈತ ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣದಲ್ಲಿ 21 ನೇ ಆರೋಪಿಯಾಗಿದ್ದಾನೆ.
ಆ್ಯಮರೋಸ್ನಿಂದ 10 ಗ್ರಾಂ ಎಲ್ಎಸ್ಡಿ ಆರೋಪಿ ಯಿಂದ ವಶ ಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳುವುದೆಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಯು ವಿಚಾರಣೆ ನಡೆಸುವ ವೇಳೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಪಾರ್ಟಿಗಳಿಗೆ ಡ್ರಗ್ ಸರಬರಾಜು ಮಾಡಿರುವುದಾಗಿ ಹೇಳಿದ್ದಾನೆ.
ಕೆಲವು ನಟಿ ಮಣಿಯರು ಪಾಲ್ಗೊಳ್ಳುತ್ತಿದ್ದ ಪಾರ್ಟಿಗಳಿಗೆ ಮಾದಕ ವಸ್ತು ಪೂರೈಸಿದ್ದಾಗಿ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. .