ಕಲೆ-ಸಾಹಿತ್ಯ ನಗರ ಸ್ಥಳೀಯ

‘ಸತ್ಯ ಪಥದ ನಿತ್ಯ ಸಂತ’ ಕೃತಿಗೆ ಲಿಂ.ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ

ಬೆಂಗಳೂರು: 2019ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ರಾಜ್ಯ ಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಲ್ಲಿ ಒಂದಾದ ಲಿಂ. ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿಗೆ ಯುವ ಲೇಖಕಿ ಸುಮ ಚಂದ್ರಶೇಖರ್ ರಚಿಸಿರುವ ಗಾಂಧಿ ವ್ಯಕ್ತಿತ್ವ ದರ್ಶನದ ‘ಸತ್ಯ ಪಥದ ನಿತ್ಯ ಸಂತ’ ಕೃತಿ ಆಯ್ಕೆಯಾಗಿದೆ.

ಈ ಕೃತಿಯು ಮಹಾತ್ಮ ಗಾಂಧೀಜಿ 150ನೇ ಜಯಂತಿ ವರ್ಷಾಚರಣೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಯುವ ಬರಹಗಾರರಿಗೆ ಪ್ರೋತ್ಸಾಹ ಧನ ಯೋಜನೆಯಡಿಯಲ್ಲಿ ಪ್ರಕಟವಾಗಿದ್ದು, 18 ಅಧ್ಯಾಯಗಳಲ್ಲಿ ಮಹಾತ್ಮ ಗಾಂಧೀಜಿಯವರ ಜೀವನ-ಸಂದೇಶಗಳ ಕುರಿತು ರಚಿಸಿರುವ ಲೇಖನಗಳ ಸಂಗ್ರಹವಾಗಿದೆ.

ಬರವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಭರವಸೆಯ ಯುವ ಬರಹಗಾರ್ತಿ ಸುಮ ಚಂದ್ರಶೇಖರ್ ಅವರ ಅನೇಕ ಲೇಖನಗಳು ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಗಾಂಧಿಸ್ಮೃತಿ ಪುರಸ್ಕಾರ ಮತ್ತು ಕನ್ನಡ ಮಾಣಿಕ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕಾಸರಗೋಡು ಜಿಲ್ಲಾ ವಾರ್ತಾ ಇಲಾಖೆಯಿಂದ ಈಗ ಕನ್ನಡದಲ್ಲೂ ಸುದ್ದಿ ರವಾನೆ

Upayuktha

ಮೇಲಧಿಕಾರಿಗಳ ಕಿರುಕುಳ: ಅರಸೀಕೆರೆ ಕೆಎಸ್ಸಾರ್ಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Upayuktha

ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಇರುವ ಪ್ರಕರಣಗಳಿಗೆ ಶೀಘ್ರ ಪರಿಹಾರ

Upayuktha

Leave a Comment