ಕಲೆ-ಸಾಹಿತ್ಯ

ಜೇಪಿ ಅವರ ‘ಸಾವರ್ಕರ್‌- ಹಿಂದುತ್ವದ ಜನಕನ ನಿಜಕತೆ’ ಕೃತಿ ನ.28ಕ್ಕೆ ಬಿಡುಗಡೆ

ಬೆಂಗಳೂರು: ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರ್ಕರ್‌ ಕುರಿತ ಮಹತ್ವದ ಕೃತಿ ‘ಸಾವರ್ಕರ್‌- ಹಿಂದುತ್ವದ ಜನಕನ ನಿಜಕತೆ’ ಇದೇ ನ.28ರಂದು ಬಿಡುಗಡೆಯಾಗಲಿದೆ.

ಕನ್ನಡ ಸಾಹಿತ್ಯಲೋಕದಲ್ಲಿ ‘ಜೇಪಿ’ ಎಂದೇ ಖ್ಯಾತರಾದ ಕನ್ನಡದ ಶ್ರೇಷ್ಠ ಅನುವಾದಕರಲ್ಲಿ ಒಬ್ಬರು ಹಾಗೂ ಪತ್ರಕರ್ತ ಬಿ.ಎಸ್‌. ಜಯಪ್ರಕಾಶ್ ನಾರಾಯಣ ಅವರು ಈ ಕೃತಿಯ ಅನುವಾದಕರು. ವಸಂತ ಪ್ರಕಾಶನದವರು ಈ ಪುಸ್ತಕವನ್ನು ಪ್ರಕಟಿಸಿದ್ದಾರೆ.

ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗುತ್ತಿರುವ ಈ ಹೊಸ ಕೃತಿ ಅತ್ಯುತ್ತಮ ಓದಿನ ಅನುಭವ ನೀಡುವಂತಿದ್ದು, ಬರಮಾಡಿಕೊಳ್ಳಲು ಕನ್ನಡಿಗರೆಲ್ಲರೂ ಉತ್ಸುಕತೆಯಿಂದ ಕಾಯುತ್ತಿದ್ದಾರೆ.

ಕೃತಿಕಾರ ಬಿ.ಎಸ್ ಜಯಪ್ರಕಾಶ್ ನಾರಾಯಣ

ಜೇಪಿ ಅವರು ಅನ್ಯಭಾಷೆಗಳ ಕೆಲ ಅತ್ಯುತ್ತಮ ಕೃತಿಗಳನ್ನು ಹೆಕ್ಕಿ ಅವುಗಳನ್ನು ಕನ್ನಡಕ್ಕೆ ತಂದಿದ್ದಾರೆ. ಎಂ.ಎಸ್. ಸುಬ್ಬುಲಕ್ಷ್ಮೀ ಅವರ ‘ಸುಸ್ವರಲಕ್ಷ್ಮೀ ಸುಬ್ಬುಲಕ್ಷ್ಮೀ’, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಆತ್ಮಕಥೆ ‘ನಾನು ಮಲಾಲ’, ಸ್ಯಾಮ್ ಪಿತ್ರೋಡ ಅವರ ಆತ್ಮಕಥೆ ‘ಭಾರತದ ಬೆಸುಗೆ’, ವಿಜಯ ಮಲ್ಯ ಕುರಿತ ‘ಸೊಗಸುಗಾರನ ಏಳುಬೀಳು’, ಓಂ ಸ್ವಾಮಿ ಅವರ ಆತ್ಮಕಥೆ ‘ಸಾಫ್ಟ್‌ವೇರ್‌ನಿಂದ ಸಾಕ್ಷಾತ್ಕಾರದೆಡೆಗೆ’, ಕಾಶ್ಮೀರಿ ಪಂಡಿತರ ಕರುಣಾಜನಕ ಕಥೆ ಹೇಳುವ ‘ಕದಡಿದ ಕಣಿವೆ’, ಸೇರಿದಂತೆ ಹತ್ತಾರು ಮಹತ್ತ್ವದ ಕೃತಿಗಳನ್ನು ಅನುವಾದಿಸಿದ್ದಾರೆ.

ಈಗ ಓಶೋ ಅವರು ಶಿಕ್ಷಣದ ಕುರಿತು ಮಾಡಿರುವ ಅಪರೂಪದ ಭಾಷಣಗಳುಳ್ಳ ‘ಶಿಕ್ಷಣ ಕ್ರಾಂತಿಗೆ ಆಹ್ವಾನ’ ಕೃತಿ ಕೆಲ ದಿನಗಳ ಹಿಂದೆ ಓದುಗರ ಕೈ ಸೇರಿದೆ. ಸಂಜಯ ಬರೂ ಅವರ ‘1991: ಹೌ ಪಿ.ವಿ. ನರಸಿಂಹರಾವ್ ಮೇಡ್ ಹಿಸ್ಟರಿ’ ಕೃತಿಯು ಕನ್ನಡದಲ್ಲಿ ‘ಪಿವಿಎನ್: ಪರ್ವಕಾಲದ ಪುರುಷೋತ್ತಮ’ ಎಂಬ ಹೆಸರಿನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದೆ.. ಎರಡು ಸಲ ಕುವೆಂಪು ಭಾಷಾ ಭಾರತಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಿಎಂಶ್ರೀ ಪ್ರತಿಷ್ಠಾನದ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಜೇಪಿ ಅವರಿಗೆ ಸಂದಿವೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕವನ: ಕನಸಿನ ಲೋಕ

Upayuktha

‘ಮುಸ್ಸಂಜೆಯ ಹೊಂಗಿರಣ:’ ಪಾಸಿಟಿವ್ ಕಾರಂತರ ಪಾಸಿಟಿವ್ ಬರಹಗಳು

Upayuktha

ಕನ್ನಡದ ‘ನುಡಿಜಾಣ’ ಕೆ. ರಾಜಕುಮಾರ್‌ ಅವರಿಗೆ ಪ್ರತಿಷ್ಠಿತ ರಾಜರತ್ನಂ ಪ್ರಶಸ್ತಿ

Upayuktha