ಶಿವಮೊಗ್ಗ: ಕೊವೀಡ್ 19 ಹಿನ್ನೆಲೆಯಲ್ಲಿ ಶಾಲಾ ತರಗತಿಗಳು ಬಂದ್ ಮಾಡಲಾಗಿದ್ದು, ಕೆಲದಿನಗಳ ಹಿಂದೆ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಗಳಾಗಿದ್ದವು.
ಇದೀಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ಮುನ್ನ ಯಾವುದೇ ಕಾರಣಕ್ಕೂ ಶಾಲೆಗಳ ಪುನರ್ ಆರಂಭಕ್ಕೆ ಸರ್ಕಾರ ಮುಂದಾಗಬಾರದು.
ಮಕ್ಕಳ ಜೀವದ ಜೊತೆ ಸರ್ಕಾರ ಚೆಲ್ಲಾಟವಾಡಬಾರದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕೊರೋನಾ ಸಂಪೂರ್ಣವಾಗಿ ನಿಯಂತ್ರಣ ಬಂದ ಮೇಲೆ ಶಾಲೆಗಳ ಆರಂಭ ಮಾಡಬೇಕು ಎಂದು ಹೇಳಿದ್ದಾರೆ.