ನಗರ ಸ್ಥಳೀಯ

ರಾಷ್ಟ್ರೀಯ ಚಿಂತನೆಯುಳ್ಳ ದೇಶಭಕ್ತರನ್ನು ಹೊರತರುವ ಕೆಲಸ ಶಾಲೆಗಳಿಂದ ಆಗಲಿ: ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ರಾಷ್ಟ್ರೀಯ ಮೌಲ್ಯಗಳನ್ನು ಕಲಿಸಿ, ಮಕ್ಕಳಲ್ಲಿ ರಾಷ್ಟ್ರೀಯ ಪರ ಚಿಂತನೆ ಮೂಡಿಸುವ ಕಾರ್ಯ ಶಾಲೆಗಳಿಂದ ಆಗಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ವಿದ್ಯಾರ್ಥಿಗಳಲ್ಲಿ ಅಂತಹ ಶಿಕ್ಷಣ ಸಿಗುವ ಕೆಲಸ ಮಾಡಬೇಕು. ಶಾಲೆಗಳು ರಾಷ್ಟ್ರಭಕ್ತರನ್ನು ಸಮಾಜಕ್ಕೆ ನೀಡುವ ಕಾರ್ಯದಲ್ಲಿ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು ಕೈ ಜೋಡಿಸಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು.

ಅವರು ಮಂಗಳೂರು ತಾಲೂಕಿನ ಗುರುಕಂಬಳದಲ್ಲಿ ನಿರ್ಮಾಣವಾಗಲಿರುವ ಮೌಲಾನಾ ಆಝಾದ್ ಮಾದರಿ ಇಂಗ್ಲೀಷ್ ಮೀಡಿಯಂ ಶಾಲೆಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಿ ಮಾತನಾಡುತ್ತಿದ್ದರು.

ಈ ಶಾಲೆ 2.35 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಅಮಿತಾ ಶೆಟ್ಟಿ ಪೆರಾರ ಹಾಗೂ ಪಂಚಾಯತ್ ಸದಸ್ಯರು, ಗ್ರಾಮದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಪರಿಹಾರ ನಿಧಿಗೆ 25 ಲಕ್ಷ, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಿಂದ 50 ಲಕ್ಷ

Upayuktha

ದ.ಕ. ಜಿಲ್ಲೆಯಲ್ಲಿ ನಾಳೆಯೂ ಪೂರ್ಣ ಲಾಕ್ ಡೌನ್; ಉಡುಪಿಯಲ್ಲಿ ಮತ್ತೆರಡು ಕೊರೊನಾ ಪ್ರಕರಣ ದೃಢ

Upayuktha

ಡಾ. ಅಜಿತ್ ಅವರಿಗೆ ಪೋಸ್ಟ್ ಡಾಕ್ಟೋರಲ್ ಪದವಿ

Upayuktha