ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

‘ಔಟ್‍ಲುಕ್’ ಸಮೀಕ್ಷೆಯಲ್ಲೂ ಎಸ್‌ಡಿಎಂಗೆ ಉತ್ಕೃಷ್ಟ ಸ್ಥಾನ

ಉಜಿರೆ: ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮ. ಕಾಲೇಜಿನ ವಿವಿಧ ವಿಭಾಗಗಳಿಗೆ ಉತ್ಕೃಷ್ಟ ಮನ್ನಣೆ ಲಭ್ಯವಾಗಿದೆ.

ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 13ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 32, ವಿಜ್ಞಾನ ವಿಭಾಗಕ್ಕೆ 47, ಕಲಾ ವಿಭಾಗಕ್ಕೆ 68 ಹಾಗೂ ವಾಣಿಜ್ಯ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 89ನೇ ಸ್ಥಾನದ ಹಿರಿಮೆ ಪ್ರಾಪ್ತವಾಗಿದೆ.

ಸಮೀಕ್ಷೆಗಾಗಿ ಪತ್ರಿಕೆಯು ಕಾಲೇಜಿನ ವಿವಿಧ ವಿಭಾಗಗಳ ಶೈಕ್ಷಣಿಕ ಚಟುವಟಿಕೆ, ಸಾಧನೆ ಹಾಗೂ ಪಡೆದ ಮನ್ನಣೆಗಳು, ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ, ಪರೀಕ್ಷಾ ಫಲಿತಾಂಶ, ಶುಲ್ಕ ವಿವರ, ಲಭ್ಯವಿರುವ ಸೌಲಭ್ಯಗಳು ಹಾಗೂ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳ ಶೈಕ್ಷಣಿಕ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಇರುವ ಸೌಲಭ್ಯಗಳು ಹಾಗೂ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪಡೆದ ಪ್ರಶಸ್ತಿಗಳು, ಸಂಶೋಧನಾ ಚಟುವಟಿಕೆಗಳು ಮುಂತಾಗಿ ಸಮಗ್ರ ವಿವರಗಳನ್ನ ಕಲೆಹಾಕಿ ಅತ್ಯುತ್ತಮ ಕಾಲೇಜುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸೆಪ್ಟಂಬರ್ 7, 2020ರ ಸಂಚಿಕೆಯಲ್ಲಿ ಸಮೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿರುವ ‘ಔಟ್‍ಲುಕ್’ ಅತ್ಯುತ್ತಮ ಕಾಲೇಜುಗಳ ಆಯ್ಕೆಯ ಮಾನದಂಡ ಮತ್ತು ಪ್ರಕ್ರಿಯೆಯ ಸಮಗ್ರ ವಿವರಗಳನ್ನು ಪ್ರಸ್ತಾಪಿಸಿದೆ. ಉಜಿರೆ ಕಾಲೇಜಿನ ಈ ಸಾಧನೆಯ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಹರ್ಷೇಂದ್ರಕುಮಾರ್ ಹಾಗೂ ಡಾ.ಬಿ. ಯಶೋವರ್ಮ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ರಾಷ್ಟ್ರಮಟ್ಟದ ಇನ್ನೊಂದು ಪ್ರಸಿದ್ಧ ವಾರಪತ್ರಿಕೆ ‘ಇಂಡಿಯಾ ಟುಡೇ’ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲೂ ಉಜಿರೆ ಧ.ಮ ಕಾಲೇಜು ಉತ್ಕೃಷ್ಟ 100 ಕಾಲೇಜುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿತ್ತು. ಆಡಳಿತ ಮಂಡಳಿಯ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯ ಸಾಂಘಿಕ ಪ್ರಯತ್ನ, ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯ ಅಂಶಗಳು ಈ ಮನ್ನಣೆ ಲಭಿಸಲು ಸಹಾಯಕವಾಗಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸತೀಶ್ಚಂದ್ರ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ರಜೆ ಆದೇಶವಿದ್ದರೂ ಶನಿವಾರ ತೆರೆದಿದ್ದ ವಿಟ್ಲದ ಶಾಲಾ ಕಾಲೇಜುಗಳು

Upayuktha

ಚೊಕ್ಕಾಡಿ 80: ಕವಿ ಸುಬ್ರಾಯ ಚೊಕ್ಕಾಡಿ ಬದುಕು ಬರಹ- ಅವಲೋಕನ ಇಂದು ಸಂಜೆ 5ಕ್ಕೆ

Upayuktha

ದ.ಕ ಜಿಲ್ಲಾ ರೆಡ್ ಕ್ರಾಸ್‍ನಿಂದ ಪಾಲಿಕೆಗೆ 12 ಸಾವಿರ ಮಾಸ್ಕ್ ವಿತರಣೆ

Upayuktha

Leave a Comment