ನಗರ ಸ್ಥಳೀಯ

ಗೃಹರಕ್ಷಕರ ಸೇವೆ ಶ್ಲಾಘನೀಯ: ಸಂತೋಷ್ ಪಾಟೀಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಕಲಬುರ್ಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಸಂತೋಷ್ ಪಾಟೀಲ್ ಗುರುವಾರ (ಜ.7) ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರ ಸೇವೆ ಶ್ಲಾಘನೀಯ ಹಾಗೂ ಸಮಾಜಮುಖಿ ಸೇವೆಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣೆ ಪಡೆ ಚೀಫ್‍ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು ಇವರು ಮಾತನಾಡಿ, ಕಲಬುರ್ಗಿ ಜಿಲ್ಲಾ ಸಮಾದೇಷ್ಟರು ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಮತ್ತು ಗೃಹರಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತಾರೆ ಹಾಗೂ ನಮ್ಮ ಜಿಲ್ಲೆಗೆ ಭೇಟಿ ನೀಡಿರುವುದು ನಮಗೆ ತುಂಬಾ ಸಂತಸ ತಂದಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಪ್ರವೀಣ್ ಜತಿನ್ ಹಾಗೂ ಕಛೇರಿ ಅಧೀಕ್ಷಕರಾದ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ, ಹಾಗೂ ಹಿರಿಯ ಗೃಹರಕ್ಷಕರಾದ ಭಾಸ್ಕರ್, ರಮೇಶ್ ಭಂಡಾರಿ, ಸುನಿಲ್ ಕುಮಾರ್ ಹಾಗೂ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಸಂತ ಅಲೋಶಿಯಸ್ ಕಾಲೇಜಿನಲ್ಲಿಂದು ಕನಸು 2019: ಗಾಲಿಕುರ್ಚಿ ಕ್ರಿಕೆಟ್ ಪಂದ್ಯಾಟ

Upayuktha

ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಮಾಸಿಕ ಸಭೆ

Upayuktha

ಮಸ್ತಕದಲ್ಲಿ ನೆನಪಿಟ್ಟುಕೊಂಡರೆ ಪುಸ್ತಕದಲ್ಲಿ ಬರೆಯಲು ಸಾಧ್ಯ: ಸಂತೋಷ್ ತಮ್ಮಯ್ಯ

Upayuktha