ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ದಲ್ಲಿ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನೂತನ ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್. ಶಂಕರ್, ಎಸ್. ಅಂಗಾರ ಮತ್ತು ಸಿಪಿ ಯೋಗೇಶ್ವರ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್, ಸಿಪಿ ಯೋಗೇಶ್ವರ್, ಜೊತೆಗೆ ಶಾಸಕರಾದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಬಿಎಸ್ ವೈ ಸಂಪುಟ ಸೇರಿದ್ದಾರೆ.