ಕ್ಷೇತ್ರಗಳ ವಿಶೇಷ ಪ್ರಮುಖ ರಾಜ್ಯ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಪಾದಯಾತ್ರಿಗಳ ಗಡಣ

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮುಖ್ಯ ಪ್ರವೇಶ ದ್ವಾರದ ಬಳಿ ಭಾನುವಾರ ಸ್ವಾಗತ ಕಚೇರಿಯನ್ನು ಉದ್ಘಾಟಿಸಿದರು.

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ 11ರಂದು ಗುರುವಾರ ‘ಮಹಾಶಿವರಾತ್ರಿ’ಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುವುದು.

ವಿಶೇಷ ಪೂಜೆ, ಅರ್ಚನೆಗಳ ಸಹಿತ ಶಿವನಾಮ ಸ್ಮರಣೆ, ಭಜನೆ, ರಥೋತ್ಸವದೊಂದಿಗೆ ಮಹಾ ಶಿವರಾತ್ರಿ ಆಚರಿಸಲಾಗುತ್ತದೆ.

ಗುರುವಾರ ಸಂಜೆ 6 ಗಂಟೆಯಿಂದ ಬೆಳಗ್ಗಿನ ವರೆಗೆ ನಾಲ್ಕು ಜಾವಗಳಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಪೂಜೆಗಳು, ಅರ್ಚನೆಗಳು, ಭಜನೆ, ಸತ್ಸಂಗ, ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ನಡೆಯುತ್ತದೆ.

ಶ್ರೀ ಡಿ. ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಮಾಹಿತಿ ಕೇಂದ್ರ, ಸುಸಜಿತ ಪ್ರಥಮ ಚಿಕಿತ್ಸಾ ಆಸ್ಪತ್ರೆ, ಕೆ.ಎಸ್. ಆರ್.ಟಿ.ಸಿ. ಸಾರಿಗೆ ನಿಯಂತ್ರಕರ ಕಚೇರಿ, ಪೊಲೀಸ್ ಸೇವಾ ಕೇಂದ್ರ ತೆರೆಯಲಾಗಿದೆ. ಭಕ್ತರಿಗೆ ಹಾಗೂ ಪಾದಯಾತ್ರಿಗಳಿಗೆ ಉಚಿತ ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಧರ್ಮಸ್ಥಳದಲ್ಲಿರುವ ವಸತಿ ಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ.

ಮಾ. 10 ರಂದು ಉಜಿರೆಯಲ್ಲಿರುವ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಬೂಡುಜಾಲು, ಸತ್ಯನಪಲ್ಕೆ, ಚಾರ್ಮಾಡಿ, ಉಜಿರೆ ಮತ್ತು ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಸ್ಪತ್ರೆಯ ಉಚಿತ ಸೇವಾ ಕೇಂದ್ರ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಅಂಬುಲೆನ್ಸ್ ಸೇವೆ ಲಭ್ಯವಿದೆ.

ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಹಾಸನದ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆಯ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ.

ಪಾದಯಾತ್ರಿಗಳ ಗಡಣ: ಬೆಂಗಳೂರು, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು ಮೊದಲಾದ ಕಡೆಗಳಿಂದ ಧರ್ಮಸ್ಥಳ ಪಾದುಯಾತ್ರಾ ಸಮಿತಿಗಳನ್ನು ರಚಿಸಿಕೊಂಡು ಇಪ್ಪತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಈಗಾಗಲೇ ಧರ್ಮಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸ- ಲೈವ್

Upayuktha

ಒ ಎಲ್ ಎಕ್ಸ್ ನಲ್ಲಿ ವಂಚನೆ ಮಾಡುತ್ತಿದ್ದ 4 ಆರೋಪಿಗಳ ಬಂಧನ

Harshitha Harish

ದ.ಕ., ಉಡುಪಿಯಲ್ಲಿ ಇಂದು ಕೊರೊನಾ ಪಾಸಿಟಿವ್ ಇಲ್ಲ, ಕಾಸರಗೋಡಿನಲ್ಲಿ ಮೂರು ಪ್ರಕರಣ

Upayuktha