ಅಪರಾಧ ಸ್ಥಳೀಯ

ಪುತ್ತೂರಿನಲ್ಲಿ ಶೂಟೌಟ್: ವ್ಯಕ್ತಿಗೆ ತೀವ್ರ ಗಾಯ, ಆಸ್ಪತ್ರೆಗೆ ದಾಖಲು

ಪ್ರಾತಿನಿಧಿಕ ಚಿತ್ರ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಶೂಟೌಟ್‌ ಘಟನೆ ನಡೆದಿದೆ. ಸಂಜೆ 6:30ರ ಸುಮಾರಿಗೆ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಪಿಸ್ತೂಲು ಮಾದರಿಯ ಆಯುಧದಿಂದ ಗುಂಡು ಹಾರಿಸಿದ್ದು, ಆ ವ್ಯಕ್ತಿಯ ಎದಗೆ ಗುಂಡು ತಗುಲಿ ತೀವ್ರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಗಾಯಾಳುವನ್ನು ಕಬಕ ಕಲಂದಡ್ಕ ನಿವಾಸಿ ಅಬ್ದುಲ್ ಖಾದರ್ (35 ವರ್ಷ) ಎಂದು ಗುರುತಿಸಲಾಗಿದ್ದು, ತೀವ್ರ ಗಾಯಗೊಂಡರೂ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ತಮ್ಮದೇ ಕಾರಿನಲ್ಲಿ ಕಬಕ ಪೇಟೆಯ ವರೆಗೆ ಬಂದಿದ್ದಾರೆ. ಬಳಿಕ ಸ್ಥಳೀಯರು ಅವರನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

(ಉಪಯುಕ್ತ ನ್ಯೂಸ್ ಸುದ್ದಿಜಾಲ)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

Related posts

ಸಿರಿಗನ್ನಡ ವೇದಿಕೆ ಕಾಸರಗೋಡು ಘಟಕದ ʼಹೇಮಂತ ಸಾಹಿತ್ಯೋತ್ಸವʼ, ಪ್ರತಿಭಾ ಪುರಸ್ಕಾರ

Upayuktha

ಫೆ. 6: ಟಿ.ಪಿ. ಕೈಲಾಸಂ ನಾಟಕ `ಟೊಳ್ಳುಗಟ್ಟಿ’ ಪ್ರಸ್ತುತಿ, ಪ್ರತಿಭೋತ್ಸವ

Upayuktha

ಫೆ.12ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Upayuktha