ಬೆಂಗಳೂರು : ಮದಗಜ ಶೂಟಿಂಗ್ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟು ಬಿದ್ದಿದ್ದು 15 ದಿನ ವಿಶ್ರಾಂತಿಗೆ ಪಡೆಯಬೇಕಾಗಿದೆ.
ಏಪ್ರಿಲ್ 5ರಿಂದ ಆರಂಭವಾಗಿದ್ದ ಶೂಟಿಂಗ್ ನಲ್ಲಿ ಶ್ರೀ ಮುರುಳಿ ಭಾಗವಹಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಮುರುಳಿ ಕಾಲಿಗೆ ಪೆಟ್ಟು ಬಿದ್ದಿದೆ.
ನಿರ್ದೇಶಕ ಮಹೇಶ್ ಕುಮಾರ್ ಮತ್ತು ಚಿತ್ರತಂಡ ಹಾಗೂ ನಿರ್ಮಾಪಕ ಉಮಾಪತಿ ಎಸ್ ಗೌಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಶ್ರೀಮುರುಳಿಗೆ ವೈದ್ಯರು 15 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.