ಉಡುಪಿ: ಅಯೋಧ್ಯೆಯ ಬಾಬರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣ ಪೂರ್ವ ಯೋಜಿತವಲ್ಲ ಎಂದು ತೀರ್ಪು ನೀಡಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನಿರ್ಣಯವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸ್ವಾಗತಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರೂ ಆಗಿರುವ ಶ್ರೀಗಳು, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ, ತೀರ್ಪನ್ನು ಸ್ವಾಗತಿಸಿದ್ದಾರೆ.
‘ಸರ್ವೋಚ್ಚ ನ್ಯಾಯಾಲಯ ಇಂದು ನೀಡಿದ ತೀರ್ಪಿನಿಂದ ನಾವು ತುಂಬ ಸಂತಸ ಅನುಭವಿಸುತ್ತಿದ್ದೇವೆ. ಸತ್ಯಕ್ಕೆ ದೂರವಾದ ಆರೋಪಗಳಿಂದ ಒಬ್ಬರನ್ನು ಹತ್ತಿಕ್ಕುತ್ತೇವೆ ಅನ್ನುವ ಮಾತು ದೂರವಾಗಿದೆ. ಸತ್ಯಮೇವ ಜಯತೇ ಎಂಬ ಮಾತು ಅಯೋಧ್ಯೆಯ ತೀರ್ಪಿನ ಬಳಿಕ ಮತ್ತೊಮ್ಮೆ ಸತ್ಯವಾಗಿದೆ. ಸತ್ಯಕ್ಕೆ ಸಾವಿಲ್ಲ. ಸುಳ್ಳಿಗೆ ಉಳಿಗಾಲವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ತೀರ್ಪನ್ನು ನಾವು ಸಂತೋಷದಿಂದ ಸ್ವಾಗತಿಸುತ್ತೇವೆ’ ಎಂದು ಶ್ರೀಪಾದರು ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.