ರಾಜ್ಯ

ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅಮಾನತು

ಮೈಸೂರು – ಮೇಯರ್ ಚುನಾವಣೆ ವೇಳೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ವಿಷಯದಲ್ಲಿ ಶಾಸಕ ತನ್ವೀರ್ ಸೇಠ್ ಪರವಾಗಿ ನಡೆದ ಪ್ರತಿಭಟನೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಶಾಸಕ ತನ್ವೀರ್ ಸೇಠ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದೆಂದು ನಡೆದ ಪ್ರತಿಭಟನೆ ವೇಳೆ ಆರು ಮಂದಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರಿಂದ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಮೈಸೂರು ಮೇಯರ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್‍ಗೆ ಮೇಯರ್ ಸ್ಥಾನ ಬಿಟ್ಟು ಕೊಟ್ಟ ತನ್ವೀರ್ ಸೇಠ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೆಲವು ಕಾಂಗ್ರೆಸಿಗರು ಒತ್ತಾಯಿಸಿದ್ದರು.

Related posts

ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಮಾರ್ಚ್ 27ಕ್ಕೆ ಆರಂಭ, ಏಪ್ರಿಲ್ 9ಕ್ಕೆ ಮುಕ್ತಾಯ

Upayuktha

ಕೊರೊನಾ ವಿಪತ್ತು: ಗೋಶಾಲೆಗಳಿಗೆ 200 ಕೋಟಿ ರೂ ಪ್ಯಾಕೇಜ್ ನೀಡಲು ಒತ್ತಾಯ

Upayuktha

ತೆಲಂಗಾಣ ಮೊದಲ ಮಾಜಿ ಗೃಹ ಸಚಿವ ನಾಯನಿ ನರಸಿಂಹ ರೆಡ್ಡಿ ನಿಧನ

Harshitha Harish