ಚೆನ್ನೈ: ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೇಂದ್ರ ಸರ್ಕಾರ ಪದ್ಮವಿಭೂಷಣ ಘೋಷಿಸಿ ಗೌರವಿಸಿದೆ. 72ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ.
ದಿವಂಗತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಕಟಿಸಲಾಗಿದೆ. ಎಸ್ಪಿಬಿ ಅವರಿಗೆ ಈಗಾಗಲೇ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಈಗ ಪದ್ಮವಿಭೂಷಣ ಸಹ ಎಸ್ಪಿಬಿ ಮುಡಿಗೇರಿದೆ.
ಎಸ್ಪಿಬಿ ಅವರ ಜೊತೆ ಜಪಾನ್ ದೇಶ ಮಾಜಿ ಪ್ರಧಾನಿ ಶಿಂಜೋ ಅಬೆ, ಡಾ.ಬೆಳ್ಳೆ ಮೋನಪ್ಪ ಹೆಗ್ಡೆ (ವೈದ್ಯಕೀಯ) ಮರಳು ಶಿಲ್ಪಿ ಸುದರ್ಶನ್ ಸಾಹೋ, ವಾಸ್ತುಶಿಲ್ಪಿ ಬಿಬಿ ಲಾಲ್, ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ನರೀಂದರ್ ಸಿಂಗ್ ಕಪನಿ (ಮರಣೋತ್ತರ), ಆಧಾತ್ಮ ಕ್ಷೇತ್ರದಲ್ಲಿ ಮೌಲಾನಾ ವಹಿದುದ್ದೀನ್ ಖಾನ್ ಅವರಿಗೂ ಪದ್ಮವಿಭೂಷಣ ನೀಡಲಾಗುತ್ತಿದೆ.