ಗ್ರಾಮಾಂತರ ಸ್ಥಳೀಯ

ಎಡನೀರು ಮಠದ ನಿಯೋಜಿತ ಯತಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಕಾಸರಗೋಡು ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ (ಜಯರಾಮ ಮಂಜತ್ತಾಯ) ಅವರು ಗುರುವಾರ (ಸೆ. 24) ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು, ಸೇವೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಬಳಿಕ ಧರ್ಮಾಧಿಕಾರಿ ಡಾ!ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಡಾ! ಹೆಗ್ಗಡೆಯವರು ಅವರಿಗೆ ಗೌರವಾರ್ಪಣೆ ಸಲ್ಲಿಸಿದರು.

ಎಡನೀರು ಮಠದ ನಿಯೋಜಿತ ಯತಿಗಳನ್ನು ಕ್ಷೇತ್ರದ ಸಕಲ ಗೌರವಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಪಾರುಪತ್ತೇದಾರ ಲಕ್ಸ್ಮಿನಾರಾಯಣ ರಾವ್, ಸೀತಾರಾಮ ತೋಳ್ಪಡಿತ್ತಾಯ, ಸ್ವಾಗತಿಸಿದರು. ಕುಂಟಾರು ರವೀಶ್ ತಂತ್ರಿ, ಗೋಕುಲ ಅಡಿಗ, ರಾಜೇಂದ್ರ ಕಲ್ಲೂರಾಯ, ಉಜಿರೆ ಅಶೋಕ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಅವರು ಬಳಿಕ ಉಜಿರೆಯ ಅರಿಪ್ಪಾಡಿ ಮಠಕ್ಕೆ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದರು. ಬಾಲಕೃಷ್ಣ ಅರಿಪ್ಪಾಡಿತ್ತಾಯರು ಅವರನ್ನು ಭಕ್ತಿಪೂರ್ವಕ ಸ್ವಾಗತಿಸಿ ಗೌರವಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕರಾವಳಿಗೆ ಮತ್ತೆ ಚಂಡಮಾರುತ: ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ

Upayuktha

ಕೋವಿಡ್-19 ಬರದಂತೆ ಇನ್ನಷ್ಟು ಜಾಗೃತರಾಗಿ: ಡಾ|| ಚೂಂತಾರು

Upayuktha

ಮೀಟರ್ ರೀಡರ್‌ಗಳ ವಜಾ: ಮೆಸ್ಕಾಂ ವಿರುದ್ಧ ಸಿಐಟಿಯು ಪ್ರತಿಭಟನೆ

Upayuktha

Leave a Comment