ಪ್ರಮುಖ ರಾಜ್ಯ ಶಿಕ್ಷಣ

ಆಗಸ್ಟ್ ಮೊದಲ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಆಗಸ್ಟ್‌ ಮೊದಲ ವಾರದಲ್ಲಿ (ಆಗಸ್ಟ್ 6 ಅಥವಾ 8ನೇ ತಾರೀಕು) ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಾರ್ಚ್‌ 27ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೂರು ತಿಂಗಳ ಕಾಲ ಮುಂದೂಡಲ್ಪಟ್ಟು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲಾಗಿತ್ತು. ಇದೀಗ ಉತ್ತರಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿವರ್ಷ ಸುಮಾರು 240 ದಿನಗಳ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿದ್ದವು. ಈ ವರ್ಷ ಕೊರೊನಾ ಮಹಾಮಾರಿಯ ಕಾರಣದಿಂದ ಎಲ್ಲ ಚಟುವಟಿಕೆಗಳೂ ಅಸ್ತವ್ಯಸ್ತವಾಗಿದ್ದು, ಶೈಕ್ಷಣಿಕ ಚಟುವಟಿಕೆಗಳು ಆರಂಭವೇ ಆಗಿಲ್ಲ. ಹೀಗಾಗಿ ಅರ್ಧ ವರ್ಷದ ಪಠ್ಯಕ್ರಮವನ್ನು ಕೈಬಿಟ್ಟು ಉಳಿದ ಪಠ್ಯಕ್ರಮವನ್ನು ಮಾತ್ರ ಆಧರಿಸಿ ತರಗತಿಗಳನ್ನು ಪುನರಾರಂಭಿಸುವ ಯೋಚನೆಯಿದೆ.

ಈ ಪ್ರಕ್ರಿಯೆಯನ್ನು ವೈಜ್ಞಾನಿಕವಾಗಿ ಮಾಡಲಾಗುವುದು ಎಂದು ಸಚಿವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಮಂಗಳೂರು ಮಹಾನಗರ ಪಾಲಿಕೆ: 44 ವಾರ್ಡ್‌ ಗೆದ್ದ ಬಿಜೆಪಿಗೆ ಸ್ಪಷ್ಟ ಬಹುಮತ

Upayuktha

ಹಿರಿಯ ನಾಯಕ ಎ.ಕೆ. ಸುಬ್ಬಯ್ಯ ಇನ್ನಿಲ್ಲ

Upayuktha

ಕಾಳಧನಿಕರಿಗೆ ಇನ್ನೊಂದು ಅವಕಾಶ: ಶೀಘ್ರವೇ ‘ಸುವರ್ಣ ಕ್ಷಮಾದಾನ’ ಯೋಜನೆ ನಿರೀಕ್ಷೆ

Upayuktha
error: Copying Content is Prohibited !!