ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿಸಲು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಸಂವಾದ ನಡೆಸಿದರು.
ಶಿಸ್ತುಬದ್ಧ ಓದುವ ಅಭ್ಯಾಸ, ವೇಳಾಪಟ್ಟಿ ಮಾಡಿ ಓದುವುದು, ಪ್ರತೀ ವಿಷಯಗಳಿಗೆ ಸಮಾನ ಪ್ರಾಶಸ್ತ್ಯ ನೀಡುವುದು ಇತ್ಯಾದಿ ವಿಷಯಗಳ ಬಗ್ಗೆ ಅರ್ಧ ಗಂಟೆಗೂ ಅಧಿಕ ಹೊತ್ತು ಮಾತುಕತೆ ನಡೆಸಿದರು. ವಿದ್ಯಾರ್ಥಿಗಳ ಕನಸುಗಳ ಬಗ್ಗೆ ಪ್ರಶ್ನೆ ಮಾಡಿದರು. ಪರೀಕ್ಷಾ ಭಯ ನಿವಾರಣೆಯ ಬಗ್ಗೆ ಮಾಹಿತಿ ನೀಡಿದರು. ತನ್ನದೇ ಬದುಕಿನ ಉದಾಹರಣೆಗಳ ಮೂಲಕ ಅವರು ಮಕ್ಕಳ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟರು.
ಅವರ ಜೊತೆಗೆ ಉಡುಪಿ ಜಿಲ್ಲೆಯ ಅಸಿಸ್ಟೆಂಟ್ ಕಮಿಷನರ್ ಕುಮಾರ್ ಅವರು ಕೂಡ ಪೂರಕ ಮಾಹಿತಿ ನೀಡಿದರು.
ಪಲಿಮಾರು ಪಂಚಾಯತ್ ಅಧ್ಯಕ್ಷೆ ಗಾಯತ್ರೀ ದಿನೇಶ್ ಪ್ರಭು, ಉಪಾಧ್ಯಕ್ಷೆ ಸೌಮ್ಯಲತ ಶೆಟ್ಟಿ, ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಶಾಲೆಯ ಎಲ್ಲಾ ಅಧ್ಯಾಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮುಖ್ಯ ಶಿಕ್ಷಕ ಪ್ರಕಾಶ್ ರಾವ್ ಪಿ. ಎನ್ ಅವರು ಅಪರ ಜಿಲ್ಲಾಧಿಕಾರಿ ಅವರನ್ನು ಶಾಲು ಹೊದೆಸಿ ಸನ್ಮಾನ ಮಾಡಿದರು. ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರ್ವಹಣೆ ಮಾಡಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ