ಮಂಗಳೂರು: ಮೈಸೂರು ಜಿಲ್ಲೆಯ ಕೆ ಆರ್ ನಗರದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 36ನೇ ವಾರ್ಷಿಕೋತ್ಸವ ಹಾಗೂ ಪ್ರೇಮಕವಿ ಕೆ ಎಸ್ ನ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ನೀಡಲಾಗುತ್ತಿರುವ ಹಿರಿಯ ಸಾಹಿತಿ ಹಾಗೂ ಅಂಕಣಕಾರ ಪ್ರೊ. ಎಚ್ಚೆಸ್ಕೆ ಶತಮಾನೋತ್ಸವ ನೆನಪಿನ ರಾಜ್ಯಮಟ್ಟದ ಪತ್ರಿಕೋದ್ಯಮ ಪ್ರಶಸ್ತಿಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಳಗದ ಅಧ್ಯಕ್ಷ ಡಾ. ಭೇರ್ಯ ರಾಮಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೋದ್ಯಮ ಹಾಗೂ ಕನ್ನಡ ನಾಡು ನುಡಿಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ ಬರುವ ಏಪ್ರಿಲ್ 18ರಂದು ಮೈಸೂರಿನಲ್ಲಿ ನಡೆಯುವ ಬಳಗದ ವಾರ್ಷಿಕೋತ್ಸವದ ವೇಳೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಡಾ ಭೇರ್ಯ ರಾಮಕುಮಾರ್ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ