ನಗರ ಸ್ಥಳೀಯ

ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ: ಉಡುಪಿ ಡಿಸಿ ಜಗದೀಶ್‌ಗೆ ರಾಜ್ಯಮಟ್ಟದ ಪ್ರಶಸ್ತಿ

ಉಡುಪಿ: 2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಿದ್ದಾರೆ.

ಕೇಂದ್ರ ಚುನಾವಣೆ ಆಯೋಗದ ಸೂಚನೆ ಅನ್ವಯ ದೇಶಾದ್ಯಂತ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜ.25ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ರಾಜ್ಯಪಾಲರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಿದ್ದಾರೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಕಳುಹಿಸಿದ ಸುತ್ತೋಲೆಯ ಸಹಿತ ವಿವರಣೆಯನ್ನು ಜಗದೀಶ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

Related posts

ಇಂಡಿಯಾ ಡಿಸೈನ್ ವೀಕ್ 2020-21ರಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

Upayuktha

ಮದ್ಯವರ್ಜನ ಶಿಬಿರಗಳಲ್ಲಿ ಮಾನಸಿಕ ಪರಿವರ್ತನೆ: ಡಿ. ವೀರೇಂದ್ರ ಹೆಗ್ಗಡೆ

Upayuktha

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪಾಲ್ಗೊಂಡ ಎನ್‍ಸಿಸಿ ಕೆಡೆಟ್ ರಕ್ಷಾ ಅಂಚನ್‍ಗೆ ಅಭಿನಂದನೆ

Upayuktha