ಮಂಗಳೂರು: ರಾಮಕೃಷ್ಣ ಮಿಷನ್ ಮಂಗಳೂರು ವತಿಯಿಂದ ‘ಸ್ವಚ್ಛ ಮಂಗಳೂರು- ಮುಂದೇನು?’ ಎಂಬ ವಿಷಯದ ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ ಜ.10ರಂದು ಸಂಜೆ 4 ಗಂಟೆಗೆ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ.
ರಾಮಕೃಷ್ಣ ಮಠ ಮಂಗಳೂರು ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರ ಸಾನಿಧ್ಯದಲ್ಲಿ ಈ ಸಮಾಲೋಚನಾ ಸಭೆ ನಡೆಯಲಿದ್ದು, ಚೆನ್ನೈನ ವೇದಾಂತ ಕೇಸರಿ ಸಂಪಾದಕರಾದ ಸ್ವಾಮಿ ಮಹಾಮೇಧಾನಂದಜಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಡಾ. ಎನ್ ವಿನಯ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಹಾಗೂ ವಿಶೇಷ ಅತಿಥಿಗಳಾಗಿ ಭಂಡಾರಿ ಫೌಂಡೇಶನ್ ಅಧ್ಯಕ್ಷರಾಗಿರುವ ಡಾ. ಮಂಜುನಾಥ ಭಂಡಾರಿ ಹಾಗೂ ಭಾರತೀಯ ಸೇನೆಯ ಮಾಜಿ ಸೈನಿಕರಾಗಿರುವ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪಾಲ್ಗೊಳ್ಳಲಿದ್ದಾರೆ.
ರಾಮಕೃಷ್ಣ ಮಿಶನ್ ಮಂಗಳೂರಿನಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಕಳೆದ 6 ವರ್ಷಗಳಿಂದ ಶ್ರಮದಾನ ಹಾಗೂ ಜನಜಾಗೃತಿ ಕಾರ್ಯ ಕೈಗೊಂಡು ಜನಮಾನಸಲ್ಲಿ ಶುಚಿತ್ವದ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತ್ತು. 2015ರಲ್ಲಿ ಸ್ವಚ್ಚತಾ ಅಭಿಯಾನ ಆರಂಭಿಸುವಾಗ 5 ವರ್ಷದ ಯೋಜನೆಯಾಗಿದ್ದರಿಂದ 2019ರ ಅಕ್ಟೋಬರ್ನಲ್ಲಿ ಸಮಾಪನಗೊಳಿಸಲಾಗಿತ್ತು.
ಆದರೆ ಅನೇಕ ಸ್ವಯಂಸೇವಕರು, ಸಮಾಜಸೇವಕರು, ಹಿರಿಯರು, ಗಣ್ಯರು ಹೀಗೆ ಅನೇಕರು ಅಭಿಯಾನವನ್ನು ಮತ್ತಷ್ಟು ವರ್ಷಗಳ ಕಾಲ ಮುಂದುವರಿಸಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಕೈಜೋಡಿಸಿದ 150ಕ್ಕೂ ಅಧಿಕ ಸಂಘ ಸಂಸ್ಥೆಗಳ ಹಾಗೂ ಸ್ವಚ್ಚತೆ ಸೇರಿದಂತೆ ನಗರದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿಯುಳ್ಳ ನಾಗರಿಕ ಸಭೆಯನ್ನು ಆಯೋಜಿಸಲಾಗುತ್ತಿದೆ ಎಂದು ಅಭಿಯಾನದ ಕಾರ್ಯದರ್ಶಿಗಳಾದ ಸ್ವಾಮಿ ಜಿತಕಾಮಾನಂದಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ