ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿನ ಮಂಗಳೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಹಾಗೂ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ, ಖಾಸಗಿ ಮತ್ತು ಸ್ಥಳೀಯ ಬ್ಯಾಂಕ್ಗಳ ಸಹಯೋಗದೊಂದಿಗೆ ಆತ್ಮನಿರ್ಭರ್ ಭಾರತ್ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ವಿತರಣಾ ಸಮಾರಂಭ ಹಾಗೂ ಇತರೆ ಯೋಜನೆಗಳ ಮಾಹಿತಿ ಕಾರ್ಯಾಗಾರ ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನ, ಮಂಗಳೂರು ಇಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್, ಜಿಲ್ಲೆಯ ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ಎಸ್.ಅಂಗಾರ, ಸಂಜೀವ ಮಟಂದೂರು, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಪ್ರವೀಣ್, ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ