ಕಾಸರಗೋಡು: ಕಾಸರಗೋಡು ಜಿಲ್ಲೆಯ ಚಟ್ಟಂಚಾಲ್ ನಲ್ಲಿ ಟಾಟಾ ಸಮೂಹ ನಿರ್ಮಿಸಿರುವ ಕೋವಿಡ್ ಆಸ್ಪತ್ರೆ ಇಂದು ಕೇರಳ ಸರಕಾರಕ್ಕೆ ಹಸ್ತಾಂತರಗೊಳ್ಳಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಸರಕಾರದ ಪರವಾಗಿ ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಅವರು ಆಸ್ಪತ್ರೆಯ ಹೊಣೆಗಾರಿಕೆಯನ್ನು ಟಾಟಾ ಸಮೂಹ ಸಂಸ್ಥೆಯಿಂದ ಪಡೆದುಕೊಳ್ಳುವರು.
ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ. ನೆಲ್ಲಿಕುನ್ನು, ಎಂ.ಸಿ. ಕಮರುದ್ದೀನ್, ಕೆ. ಕುಂಞಿರಾಮನ್, ಎಂ. ರಾಜಗೋಪಾಲನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ. ಬಶೀರ್ ಸಹಿತ ಆಮಂತ್ರಿತ 50 ಮಂದಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಪೂರ್ಣರೂಪದಲ್ಲಿ ಪಾಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.