ಬೆಂಗಳೂರು: ಕೆಜಿಎಫ್ 2 ಚಿತ್ರದ ಟೀಸರ್ ಗುರುವಾರ ಯೂಟ್ಯೂಬ್ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ನಿರ್ಮಿಸಿದೆ.
ವಿಶೇಷವೆಂದರೆ ಅತ್ಯಂತ ಕಡಿಮೆ ಸಮಯದಲ್ಲಿ ಯೂಟ್ಯೂಬ್ನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ವಿಶ್ವದ ಮೊದಲ ಟೀಸರ್ ಎಂಬ ಹೆಗ್ಗಳಿಕೆಯನ್ನು ಕೆಜಿಎಫ್ 2 ಸಿನಿಮಾದ ಟೀಸರ್ ಪಡೆದುಕೊಂಡಿದೆ.
ಜನವರಿ 07 ರ ರಾತ್ರಿ 9.30 ಕ್ಕೆ ಬಿಡುಗಡೆಯಾದ ಟೀಸರ್, ಜನವರಿ 08 ರ ಬೆಳಿಗ್ಗೆ 10 ಗಂಟೆ ವೇಳೆಗೆ 2.3 ಮಿಲಿಯನ್ ಅಂದರೆ 23 ಲಕ್ಷ ಲೈಕ್ಸ್ ಪಡೆದುಕೊಂಡಿದೆ.