ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅನುಭವವೇ ಜೀವನದ ಮುಂದಿನ ಮೆಟ್ಟಿಲು: ದೇವಿಚರಣ್

ಪುತ್ತೂರು: ಅನುಭವವೇ ಮುಂದಿನ ಜೀವನದ ಮೆಟ್ಟಿಲು, ಸ್ಪರ್ಧೆಗಳು ಅನುಭವವನ್ನು ನೀಡುತ್ತದೆ ಮತ್ತು ವ್ಯಕ್ತಿತ್ವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ದೇವಿಚರಣ್ ಹೇಳಿದರು.

ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ಐಟಿ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ‘ಟೆಕ್ನೊ ಟ್ಯಾಲೆಂಟ್’ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಗೆಲ್ಲಬೇಕಾದರೆ, ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸೋಲು-ಗೆಲುವು ಮುಖ್ಯವಲ್ಲ, ಪ್ರಶಸ್ತಿ ಸಾಂಕೇತಿಕವಷ್ಟೇ, ಆದರೆ ಭಾಗವಹಿಸುವಿಕೆ ನಮ್ಮನ್ನು ಕಾರ್ಯನಿರತವನ್ನಾಗಿಸುತ್ತದೆ ಎಂದು ತಿಳಿಸಿದರು.

ಗಣಕಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಚಿತ್ರಾ, ಪ್ರಶಸ್ತಿ ವಿಜೇತರ ಹೆಸರನ್ನು ವಾಚಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ದಿಶಾ ಸ್ವಾಗತಿಸಿ, ತೃತೀಯ ಬಿಸಿಎ ವಿದ್ಯಾರ್ಥಿನಿ ಸುಷ್ಮಾ ಹೆಗ್ಡೆ ವಂದಿಸಿದರು. ದ್ವೀತಿಯ ಬಿಸಿಎ ವಿದ್ಯಾರ್ಥಿನಿ ಮೋಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಕಾರ್ಕಳ: ಇನ್ನಾ ಪ್ರೌಢಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ

Upayuktha

ಗೃಹರಕ್ಷಕ ದಳ ಘಟಕಾಧಿಕಾರಿಗಳ ಸಭೆ ನ.26ಕ್ಕೆ

Upayuktha

ಅಳದಂಗಡಿ ಬಸದಿಗೆ ಭವ್ಯ ಮೆರವಣಿಗೆಯಲ್ಲಿ ದೇವರ ಮೂರ್ತಿಗಳು

Upayuktha