ಬೆಂಗಳೂರು: ಕೆ-ಸಿಇಟಿ 2020 ಪರೀಕ್ಷೆಗಳು ನಿಗದಿಯಂತೆ ಇದೇ ತಿಂಗಳ ಜುಲೈ 30 ಮತ್ತು 31ರಂದು ನಡೆಯಲಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಈ ವಿಷಯ ಪ್ರಕಟಿಸಿರುವ ಅವರು, ಕೆಲವು ದಿನಗಳ ಹಿಂದೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಯುಜಿಸಿ ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಒಂದು ತೀರ್ಮಾನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆಂಬ ಇಚ್ಛೆ ಇದ್ದಲ್ಲಿ, ಅವರುಗಳಿಗೆ ಮುಂದಿನ ಸೆಮಿಸ್ಟರ್ನಲ್ಲಿ ಪ್ರತ್ಯೇಕ ಪರೀಕ್ಷೆಗಳನ್ನು ನಡೆಸಲಾಗುವುದು.
ಕೆಲವು ದಿನಗಳ ಹಿಂದೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು UGC ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಒಂದು ತೀರ್ಮಾನಕ್ಕೆ ಬಂದಿದೆ.
1/4— Dr. Ashwathnarayan C. N. (@drashwathcn) July 10, 2020
ವಿದ್ಯಾರ್ಥಿಗಳಿಗೆ ಹಿಂಬಾಕಿ (backlog) ಇದ್ದರೆ ಆ ವಿಷಯಗಳನ್ನು ಮುಂದಕ್ಕೆ ಒಯ್ಯಲಾಗುವುದು (Carry Forward ಮಾಡಲಾಗುವುದು) ಮತ್ತು ಮುಂದಿನ ಸೆಮಿಸ್ಟರ್ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು. ಬ್ಯಾಕ್ಲಾಗ್ ಗಳ ಸಹಿತ ಅಂತಿಮ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪರೀಕ್ಷೆಗಳನ್ನು ನಡೆಸಲಾಗುವುದು. ಸಂಬಂಧಪಟ್ಟ ವಿಶ್ವವಿದ್ಯಾಲಯಗಳು ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಇತರ ಮಾಹಿತಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಿವೆ. ಯಾವುದೇ ಅನುಮಾನಗಳಿದ್ದಲ್ಲಿ 080-22341394 ಅನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.