ರಾಜ್ಯ

ಸಿಎಂ ಸ್ಥಾನ ದಲ್ಲಿ ಯಾವುದೇ ಬದಲಾವಣೆ ಇಲ್ಲ ; ಊಹಾಪೋಹಾಗಳಿಗೆ ಕಿವಿಗೊಡಬೇಡಿ -ಬಿಎಸ್ ವೈ

ಬೆಂಗಳೂರು: ಯಡಿಯೂರಪ್ಪ ಅವರು ದೆಹಲಿಗೆ ಹೋಗುತ್ತಿದ್ದಂತೆಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಗಾಳಿ ಸುದ್ದಿಗಳು ಜೋರಾಗಿ ಹಬ್ಬುತ್ತಿದ್ದು ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂತಹ ಯಾವುದೇ ಪ್ರಶ್ನೆಗಳು ಇಲ್ಲ. ಪ್ರಧಾನಮಂತ್ರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಕುರಿತಂತೆ ಮಾತುಕತೆ ನಡೆಸಲಾಯಿತು.

ಈ ವೇಳೆ ಮೋದಿಯವರು ಅಹಮದಾಬಾದ್ ಅನ್ನು ಪರಿವರ್ತಿಸುವಲ್ಲಿ ಅಸಾಧಾರಣ ಕೆಲಸ ಮಾಡಿದ ಅಧಿಕಾರಿಯ ಹೆಸರನ್ನು ಸೂಚಿಸಿದರು. ಅಲ್ಲದೆ, ನನ್ನ ಆರೋಗ್ಯವನ್ನೂ ವಿಚಾರಿಸಿದರು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಡೆಯುತ್ತಿಲ್ಲ. ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆಂದು ಸ್ಪಷ್ಟಪಡಿಸಿದರು.

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಂತಹ ಯಾವುದೇ ಸಾಧ್ಯತೆಗಳಿಲ್ಲ. ಹಾಗೆಯೇ ಶೇ.100ಕ್ಕೆ ನೂರರಷ್ಟು ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವು ಮುಖ್ಯಮಂತ್ರಿಗಳ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತಾರೆಂದಿದ್ದಾರೆ.

Related posts

ರಾಜ್ಯದಲ್ಲಿಂದು 84 ಮಂದಿಗೆ ಪಾಸಿಟಿವ್; ಒಂದೇ ದಿನದಲ್ಲಿ ಅತ್ಯಧಿಕ

Upayuktha

ಜಗತ್ತಿನ ಕತ್ತಲು ಕಳೆಯಲಿ: ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Upayuktha

ಪತ್ರಕರ್ತರು ಒಳ್ಳೆಯ ವಿಷಯಗಳನ್ನು ಮಾತ್ರ ಸಮಾಜಕ್ಕೆ ನೀಡಿ: ಡಾ. ವೀರೇಂದ್ರ ಹೆಗ್ಗಡೆ

Upayuktha

Leave a Comment