ಅಪರಾಧ ಸ್ಥಳೀಯ

ವಾಟ್ಸಪ್‌ನಲ್ಲಿ ಬೆದರಿಕೆ ಸಂದೇಶ: ಇಬ್ಬರ ವಿರುದ್ಧ ಕೇಸು, ಒಬ್ಬನ ಬಂಧನ

ಮಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕೆಲವು ವ್ಯಕ್ತಿಗಳಿಗೆ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೊಬ್ಬರಿಗೆ ಬೆದರಿಕೆ ಕರೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಂಟ್ವಾಳ ಪೆರುವಾಯಿ ಗ್ರಾಮದ ಇಬ್ಬರ ವಿರುದ್ಧ ವಿಟ್ಲ ಪೊಲೀಸರು ಕೇಸು ದಾಖಲಿಸಿದ್ದಾರೆ. ಅವರ ಪೈಕಿ ಒಬ್ಬನ್ನು ಸೋಮವಾರ ವಶಕ್ಕೆ ಪಡೆಯಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ವಿವರ: ಬಂಟ್ವಾಳ ಪೆರುವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರು ಎನ್ಆರ್‌ಸಿ ಮತ್ತು ಸಿಎಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ ಹಿಂದೂ ಸಂಘಟನೆಗೆ ಸೇರಿದ ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಪೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಅಲ್ಲದೆ ವಾಟ್ಸಾಪ್ ಸಂದೇಶದಲ್ಲಿ ಹಿಂದೂ ಸಂಘಟನೆಯೊಂದರ ಸದಸ್ಯರುಗಳನ್ನು ಹಾಗೂ ಕೆಲವು ರಾಜಕೀಯ ನಾಯಕರುಗಳನ್ನು ಕೊಲ್ಲುವ ಬೆದರಿಕೆ ಹಾಕಿದದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕಲಂ: 153(ಎ),504,505(2),507,ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಗೃಹರಕ್ಷಕ ದಳ ಘಟಕಾಧಿಕಾರಿಗಳ ಸಭೆ ನ.26ಕ್ಕೆ

Upayuktha

ಕ್ರಿಯಾತ್ಮಕತೆಗೆ ಲೆಕ್ಕ ಲೇಸು

Upayuktha

ಧರ್ಮಸ್ಥಳ: ಬಾಣಸಿಗರಾದ ಕೆಎಸ್ಆರ್‌ಟಿಸಿ ನೌಕರರು

Upayuktha