ಗ್ರಾಮಾಂತರ ಸ್ಥಳೀಯ

ಕುತ್ಲೂರಿನಲ್ಲಿ ಹುಲಿ ಪ್ರತ್ಯಕ್ಷ, ಗ್ರಾಮದಲ್ಲಿ ಆತಂಕ

ಪ್ರಾತಿನಿಧಿಕ ಚಿತ್ರ

ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಎಂಬಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

‘ವೇಣೂರು– ನಾರಾವಿ ರಸ್ತೆಯಲ್ಲಿ 9:15ರ ಸುಮಾರಿಗೆ ನಾನು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಲಿ ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಹುಲಿ ನಂತರ ಪೊದೆಯೊತ್ತ ಸಾಗಿದೆ’ ಎಂದು ಪ್ರತ್ಯಕ್ಷದರ್ಶಿ ರವಿ ಪೂಜಾರಿ ತಿಳಿಸಿದ್ದಾರೆ.

‘ಬಜಿಲಪಾದೆಯ ಸುತ್ತಮುತ್ತ ಎರಡು ವಾರಗಳ ಅಂತರದಲ್ಲಿ ನಾನು ಮೂರು ಬಾರಿ ಹುಲಿಯನ್ನು ನೋಡಿದ್ದೇನೆ. ವಾರದ ಹಿಂದೆ ಗೂಡಂಗಡಿಯೊಂದರ ಹತ್ತಿರ ಕಾಣಿಸಿಕೊಂಡಿತ್ತು’ ಎಂದು ಮತ್ತೊಬ್ಬರು ಪ್ರತ್ಯಕ್ಷದರ್ಶಿ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಗ್ರಾಮದಲ್ಲಿ ಆತಂಕ: ಗ್ರಾಮದಲ್ಲಿ ಕೆಲವು ನಾಯಿಗಳು ನಾಪತ್ತೆಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯವರು ತಕ್ಷಣ ಹುಲಿಯನ್ನು ಸೆರೆಹಿಡಿದು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಂಗಳೂರಿನಲ್ಲಿ ‘ನರೇಂದ್ರ ವಿಜಯ’ ಯಕ್ಷಗಾನ ಪ್ರದರ್ಶನ

Upayuktha

ಪುತ್ತೂರಿನಲ್ಲಿ ನಾಳೆ ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಗೆ ಪದೋನ್ನತಿ ಕಾರ್ಯಕ್ರಮ

Upayuktha

ಈ ಹಿರಿಯ ಜೀವಗಳಿಗೆ ನೆರವಾಗಿ…

Upayuktha

Leave a Comment