ರಾಜ್ಯ

ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ರವರ ನಾಳೆ ನಿಶ್ಚಿತಾರ್ಥ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ.

ನಗರದ ಖಾಸಗಿ ಹೋಟೆಲ್ ಯೊಂದರಲ್ಲಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗಡೆಯವರ ನಿಶ್ಚಿತಾರ್ಥ ನಡೆಯಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥಕ್ಕೆ ತಯಾರಿ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ಮಾಹಿತಿ ತಿಳಿಸಿವೆ.

ಇದೀಗ ನಿಶ್ಚಿತಾರ್ಥ ಸಮಾರಂಭದಲ್ಲಿ ಎಸ್.ಎಂ.ಕೃಷ್ಣ ಕುಟುಂಬಸ್ಥರು ಹಾಗೂ ಡಿಕೆ.ಶಿವಕುಮಾರ್ ಕುಟುಂಬಸ್ಥರು ಭಾಗಿಯಾಗಲಿದ್ದಾರೆ

Related posts

ರಾಮ ಮಂದಿರಕ್ಕೆ ಶಿಲಾನ್ಯಾಸ: ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಶೇಷ ಪೂಜೆ

Upayuktha

350 ಉಪನ್ಯಾಸಕರ ನೇಮಕ: ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಡಿಸಿಎಂ ಸೂಚನೆ

Upayuktha News Network

ಕೊರೊನಾ ಅಪ್‌ಡೇಟ್: ದ.ಕ.ದಲ್ಲಿ 10 ಮಂದಿ ವೈದ್ಯರ ಸಹಿತ 44 ಮಂದಿಗೆ ಸೋಂಕು ದೃಢ, ಉಡುಪಿ- 9, ಕರ್ನಾಟಕ-947

Upayuktha