ಅಪಘಾತ- ದುರಂತ ಜಿಲ್ಲಾ ಸುದ್ದಿಗಳು

ಮಂಗಳೂರಿನಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ; ನವದಂಪತಿಗಳು ಸಾವು

ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಲಾರಿಯೊಂದು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಯಿಂದ ನವದಂಪತಿಗಳು ಸಾವನ್ನಪ್ಪಿದ್ದಾರೆ.

ಮೃತರನ್ನು ಬಜಾಲ್ ನಿವಾಸಿ ರಯಾನ್ ಫರ್ನಾಂಡಿಸ್ ಮತ್ತು ಪ್ರಿಯಾ ಫರ್ನಾಂಡಿಸ್ ಎಂದು ಪತ್ತೆ ಹಚ್ಚಲಾಗಿದೆ.

ಇವರು ಉಳ್ಳಾಲ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿದ್ದು ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು.

ಹಾಗೆಯೇ ದಂಪತಿಗಳಿದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದ ಪರಿಣಾಮ ಪ್ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ರಯಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮರಣ ಹೊಂದಿದ್ದಾರೆ.

ಈ ಬಗ್ಗೆ ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಎಡನೀರು ಶ್ರೀಗಳ ದೇಹಾಂತ್ಯ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha

ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Upayuktha

ನಿರಂತರ ಯೋಗದಿಂದ ಮಾನಸಿಕ ಒತ್ತಡ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ: ಡಾ. ಪ್ರಭಾಕರ ಭಟ್ ಕಲ್ಲಡ್ಕ

Upayuktha

Leave a Comment