ತುಮಕೂರು: ತುಮಕೂರು ನಗರ ಪಾಲಿಕೆ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ ಚುನಾವಣೆ ಫೆ.26ರಂದು ಚುನಾವಣೆ ನಡೆದಿದ್ದು, ಒಂದು ದಶಕದ ಬಳಿಕ ತುಮಕೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಭಾರೀ ಕೂತುಹಲ ಮೂಡಿಸಿದ್ದು,ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತವಿರಲಿಲ್ಲ.
ಆದರೆ ಈ ಬೆಳವಣಿಗೆಉಯ ನಡುವೆಯೂ ಕಮಲ ಅರಳಿದ್ದು,ಪಾಲಿಕೆ ಮೇಯರ್ ಆಗಿ ಬಿಜೆಪಿಯ ಬಿ.ಜಿ. ಕೃಷ್ಣಪ್ಪ, ಉಪಮೇಯರ್ ಆಗಿ ಜೆಡಿಎಸ್ನ ನಾಜೀಮಾಬಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಬಾರಿ ಕಾಂಗ್ರೆಸ್- ಜೆಡಿಎಸ್ ಒಟ್ಟಾಗಿ ಅಧಿಕಾರ ಹಂಚಿಕೊಂಡು ಅಧಿಕಾರ ಹಿಡಿದಿದ್ದವು. ಆದರೆ ಈ ಬಾರಿ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಕಾಂಗ್ರೆಸ್, ಜೆಡಿಎಸ್ನಲ್ಲಿ ಪರಿಶಿಷ್ಟ ಪಂಗಡದ ಸದಸ್ಯರು ಆಯ್ಕೆ ಆಗಿಲ್ಲದ ಕಾರಣ, ಈ ವರ್ಗದ ಏಕೈಕ ಸದಸ್ಯ ಬಿಜೆಪಿಯ ಬಿ.ಜಿ.ಕೃಷ್ಣಪ್ಪ ಅವರು ಮೇಯರ್ ಆಗಿ ಅವಿರೋಧ ಆಯ್ಕೆಯಾಗುವುದು ಖಚಿತವಾಗಿತ್ತು. ಈ ಮೂಲಕ 10 ವರ್ಷಗಳ ಬಳಿಕ ಬಿಜೆಪಿ ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.