ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಬಹುಮಾನವಲ್ಲ: ಪ್ರೊ. ಎಸ್ ಸತೀಶ್ಚಂದ್ರ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ 2 ದಿನಗಳ ವಿಶೇಷ ಪ್ರತಿಭಾ ಸ್ಪ್ರರ್ಧೆಗೆ ಚಾಲನೆ

ಉಜಿರೆ: ‘ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯವೇ ಹೊರತು ಬಹುಮಾನವಲ್ಲ ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವಿಶೇಷ ವೇದಿಕೆಯನ್ನು ನಿರ್ಮಿಸಲಾಗಿದ್ದು ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ವಿಶೇಷ ಕಲೆಗಳನ್ನು ಹೊರಜಗತ್ತಿಗೆ ತೋರಿಸಲು ಈ ವೇದಿಕೆ ಸಹಕಾರಿಯಾಗಲಿದೆ’ ಎಂದು ಉಜಿರೆಯ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಎಸ್. ಸತೀಶ್ಚಂದ್ರ ಹೇಳಿದರು.

ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಎರಡು ದಿನ ನಡೆಯಲಿರುವ ವಿಶೇಷ ಕಾಲೇಜು ಮಟ್ಟದ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಸಿ ಮಾತನಾಡಿದರು.

‘ಇದು ಕಾಲೇಜಿನ ಮಹತ್ವದ ಕಾರ್ಯಕ್ರಮ ಎಲ್ಲಾ ವಿದ್ಯಾರ್ಥಿಗಳ ಭಾಗವಹಿಸುವಿಕೆ ಈ ಕಾರ್ಯಕ್ರಮದ ವಿಶೇಷ, ಎಲ್ಲ ಅಧ್ಯಾಪಕರು, ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ, ಇಂತಹ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಿಗೆ ಕಲಾಕ್ಷೇತ್ರದಲ್ಲಿ ತರಬೇತಿಯನ್ನು ನೀಡಿದಂತಾಗುತ್ತದೆ. ಎರಡು ದಿನಗಳ ಅವಧಿಯಲ್ಲಿ ಸುಮಾರು 16 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಒಂದೂವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ವೇದಿಕೆಯ ಮೇಲೆ ಭಾಗವಹಿಸಲಿದ್ದಾರೆ’ ಎಂದರು.

ಯಾವುದೇ ತರಬೇತುದಾರರ ಸಹಾಯವಿಲ್ಲದೇ ವಿದ್ಯಾರ್ಥಿಗಳೇ ಸೇರಿ ಪ್ರಸ್ತುತಪಡಿಸುವ ಕಾರ್ಯಕ್ರಮ ಇದಾಗಿದ್ದು ಈ ಸ್ಪರ್ಧೆಯಲ್ಲಿ 43 ವಿದ್ಯಾರ್ಥಿಗಳ ತಂಡ ಭಾಗವಹಿಸಲಿದೆ. ನೃತ್ಯ, ರೂಪಕ, ನಾಟಕ, ಸಂಗೀತ ಕಲೆ, ಜನಪದ, ಕಲಾಪ್ರಕಾರಗಳನ್ನು ಪ್ರದರ್ಶಿಸಲಿದ್ದಾರೆ ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಹಾವು ಕಡಿತ-ಚಿಕಿತ್ಸಾ ವಿಧಾನ: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮ

Upayuktha

ಮೀನು ಮಾರಲು ಹೋಗಿದ್ದ ವ್ಯಕ್ತಿ ನಾಪತ್ತೆ

Upayuktha

ಮಹಾಶಿವರಾತ್ರಿ: ಫೆ. 21ರಂದು ಪೆರಡಾಲದಲ್ಲಿ ಏಕಾಹ ಭಜನೆ ಉತ್ಸವ

Upayuktha