ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳಿಂದ ನಾಳೆ ಹೊಸ ವರ್ಷಾಚರಣೆ

ಆದರ್ಶ ಗೋಖಲೆ ಉಪನ್ಯಾಸ, ಭಾರತೀಯ ದಿನದರ್ಶಿಕಾ ಬಿಡುಗಡೆ

ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಮಾ.13ರಂದು ಬೆಳಗ್ಗೆ 9ಕ್ಕೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ (ಸಿಬಿಎಸ್‍ಇ)ದಲ್ಲಿ ಹೊಸವರ್ಷದ ಆಚರಣಾ ಕಾರ್ಯಕ್ರಮ ನಡೆಯಲಿದೆ. ಭಾರತೀಯ ದೇಸೀ ಪರಂಪರೆಯಂತೆ ಯುಗಾದಿ ಹೊಸವರ್ಷದ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಯುಗಾದಿ ಭಾರತೀಯ ಹೊಸವರ್ಷ ಎಂಬ ಕಲ್ಪನೆ ಮೂಡಿಸುವುದರ ಜತೆಗೆ, ಭಾರತೀಯ ಸಂಸ್ಕøತಿಯ ಪ್ರಸರಣದ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ.

ಈ ಕಾರ್ಯಕ್ರಮದಲ್ಲಿ ಅಂಬಿಕಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ರೂಪಿಸಿ, ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಾಯೋಜಿಸಿರುವ ‘ಆಮ್ನಾಯಾಃ – ಭಾರತೀಯ ದಿನದರ್ಶಿಕಾ – ಗಂಧವಹಸದನಮ್’ ಎಂಬ ಭಾರತೀಯ ಕ್ಯಾಲೆಂಡರ್ ಅನ್ನು ಲೋಕಾರ್ಪಣೆಗೊಳಿಸಲಾಗುವುದು. ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಾಗ್ಮಿ ಆದರ್ಶ ಗೋಖಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ನ ಸಿಇಒ ಬಲರಾಮ ಆಚಾರ್ಯ ಭಾರತೀಯ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಹೊಸವರ್ಷ ಆಚರಣೆ ಕಾರ್ಯಕ್ರಮವು ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಬಳಿಯ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರತ್ಯೇಕವಾಗಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಪುತ್ತೂರು: ಫಿಲೋಮಿನಾ ಕಾಲೇಜಿನಲ್ಲಿ ‘ಯಕ್ಷ ಸಂವಾದ ಸರಣಿ’

Upayuktha

ಸುಳ್ಯ: ಕೆವಿಜಿ ಮೆಡಿಕಲ್‌ ಕಾಲೇಜಿನಲ್ಲಿ ‘ಸ್ಪಂದನ’ ರಾಷ್ಟ್ರೀಯ ವಿಚಾರ ಸಂಕಿರಣ, ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟನೆ

Upayuktha

ದ.ಕ.ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್-19 ಸೋಂಕು ಪತ್ತೆ

Upayuktha