ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವಿ ಕಾಲೇಜಿನಲ್ಲಿ ಶನಿವಾರ 152ನೇ ಸಂಸ್ಥಾಪನಾ ದಿನಾಚರಣೆ ಸೆ.19ಕ್ಕೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ತನ್ನ 152 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್ 19 (ಶನಿವಾರ) ರಂದು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಆಯೋಜಿಸಿದೆ.

ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಚಿನ್ನಪ್ಪ ಗೌಡ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ವಿಶ್ವವಿದ್ಯಾನಿಲಯದ ಕುಲಸಚಿವ ಕೆ. ರಾಜು ಮೊಗವೀರ, ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ ಉಪಸ್ಥಿತರಿರಲಿದ್ದಾರೆ, ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್ ಎಂ.ಎ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಶಿರಸಿ: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ –ಆಪರೇಟಿವ್ ಬ್ಯಾಂಕ್ ವತಿಯಿಂದ ವಿವಿಧ ಪ್ರಶಸ್ತಿಗಳ ಪ್ರದಾನ

Upayuktha

ಕೊರೊನಾ ಅಪ್‌ಡೇಟ್ಸ್‌: ಉಡುಪಿಯಲ್ಲಿ 15, ರಾಜ್ಯದಲ್ಲಿ 178 ಪಾಸಿಟಿವ್ ಪ್ರಕರಣ

Upayuktha

ದ.ಕ.ಜಿಲ್ಲೆಯಲ್ಲಿ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಕೆ

Upayuktha

Leave a Comment