ದೇಶ-ವಿದೇಶ

ಪಾಕಿಸ್ತಾನ ಸೇನೆ ಯಿಂದ ಅಪ್ರಚೋದಿತ ಗುಂಡಿನ ದಾಳಿ; 4 ಭಾರತೀಯ ಯೋಧರಿಗೆ ಗಾಯ

ಕಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಈ ಘಟನೆಯಲ್ಲಿ ನಾಲ್ಕು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಖ್ನೂರ್ ಸೆಕ್ಟರ್ ನ ಕೇರಿ ಬಟ್ಟಲ್ ಪ್ರದೇಶದಲ್ಲಿ ಪಾಕ್ ಸೇನೆ ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರಿಂದ ಸೇನೆಯ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ನಾಲ್ವರು ಸೈನಿಕರನ್ನು ಚಿಕಿತ್ಸೆಗಾಗಿ ಉದಂಪೂರ್‌ನ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.

 

Related posts

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಎಸ್‌ಪಿಜಿ ಭದ್ರತೆ ಇನ್ನಿಲ್ಲ

Upayuktha

ಪೌರತ್ವ ತಿದ್ದುಪಡಿ ಕಾಯ್ದೆ: ಈಶಾನ್ಯ ರಾಜ್ಯಗಳು, ಬಂಗಾಳ, ಕೇರಳದಲ್ಲಿ ವ್ಯಾಪಕ ಪ್ರತಿಭಟನೆ

Upayuktha

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ 31ಕ್ಕೆ ಏರಿಕೆ

Upayuktha