ಬಳ್ಳಾರಿ: ಈಗಾಗಲೇ ಭರದಿಂದ ಸಾಗುತ್ತಿರುವ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಕೂಡ ಬಳಕೆ ಮಾಡಲಾಗುತ್ತದೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಕೆರೆಯ ಎಚ್ಎಲ್ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಾಸಕರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರೋದು ನಮಗೆಲ್ಲ ಖುಷಿ ತಂದಿದೆ. ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ರಾಮನೂ ಕೂಡ ನೆಲೆಸಿದ್ದ ಎಂಬ ಪ್ರತೀತಿಯಿದೆ. ಹೀಗಾಗಿ ಅಲ್ಲಿಂದ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಒಂದು ಕಲ್ಲನ್ನು ಒಯ್ಯಲಾಗಿದೆ. ರಾಮಮಂದಿರದಲ್ಲೂ ಕೂಡ ಅಂಜನಾದ್ರಿ ಬೆಟ್ಟದ ಕಲ್ಲನ್ನು ನಾವು ನೋಡಬಹುದು ಎಂದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.