ಹೈದರಾಬಾದ್ : ಹೈದರಾಬಾದ್ ನ ಮಹಾನಗರ ಪಾಲಿಕೆ ಚುನಾವಣೆಯಾಗಿದ್ದು, ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ರೋಡ್ ಶೋ ನಡೆಸಿದ್ದಾರೆ.
ಮಲ್ಕಾಜ್ಗಿರಿಯಲ್ಲಿ ಮೆರವಣಿಗೆ ನಡೆಸಿದ್ದು, ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಖುದ್ದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅಲ್ಲದೇ ಅನೇಕ ಹಿರಿಯ ಮುಖಂಡರು ಇದೇ ಮೊದಲ ಬಾರಿಗೆ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದಾರೆ.
ಈ ವಾರದಲ್ಲಿ ಪ್ರಚಾರ ಕೈಗೊಳ್ಳಲಿರುವ ಹಿರಿಯ ನಾಯಕರ ಪಟ್ಟಿಯನ್ನು ತೆಲಂಗಾಣ ಬಿಜೆಪಿ ನಾಯಕರು ಪ್ರಕಟಿಸಿದ್ದಾರೆ.