ನಿಧನ ಸುದ್ದಿ ಪ್ರಮುಖ

ಬರಹಗಾರ, ಹಿರಿಯ ಸಂಶೋಧಕ ಡಾ. ಎಂ ಚಿದಾನಂದ ಮೂರ್ತಿ ನಿಧನ

ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ವಿದ್ವಾಂಸ, ಸಂಶೋಧಕ, ಬರಹಗಾರ ಡಾ. ಎಂ ಚಿದಾನಂದ ಮೂರ್ತಿ (88) ಅವರು ಶನಿವಾರ ಬೆಳಗಿನ ಜಾವ 3:45ರ ವೇಳೆಗೆ ನಿಧನರಾದರು.

ಶ್ವಾಸಕೋಶದ ಸೋಂಕಿಗೆ ತುತ್ತಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು. ಅವರು ಪುತ್ರ ವಿನಯ್ ಕುಮಾರ್‌, ಪುತ್ರಿ ಶೋಭಾ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ವಿಜಯ ನಗರ ಸಾಮ್ರಾಜ್ಯ, ಹಂಪಿ ಪರಿಸರದ ಬಗ್ಗೆ ಹಲವಾರು ಸಂಶೋಧನೆಗಳನ್ನು ನಡೆಸಿದ್ದ ಅವರು, ವಚನ ಸಾಹಿತ್ಯ, ಕನ್ನಡ ಭಾಷಾ ಶಾಸ್ತ್ರ ಹಾಗೂ ಶಾಸನ ಶಾಸ್ತ್ರದಲ್ಲಿ ಅಪಾರ ಕೊಡುಗೆಗಳನ್ನು ನೀಡಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಯಿಂದ ಬೆಂಗಳೂರು ವಿಜಯ ನಗರ ಸಮೀಪದ ಹಂಪಿ ನಗರದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಅಂತ್ಯಕ್ರಿಯೆ ನಡೆಯಲಿದ್ದು, ಅವರ ಆಸೆಯಂತೆ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ, ಸಚಿವ ಎಸ್‌. ಸುರೇಶ್ ಕುಮಾರ್‌ ಶೋಕ ವ್ಯಕ್ತಪಡಿಸಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕೊರೊನಾ ವಿರುದ್ಧ ಸಮರ: ನಾಡಿನ ಹಿರಿಯರಿಗೆ ಸ್ವತಃ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ ಪ್ರಧಾನಿ ಮೋದಿ

Upayuktha

ತುಳುನಾಡ ಬಾಲೆ ಬಂಗಾರ್- 2019 ಮುದ್ದು ಮಕ್ಕಳ ಫೋಟೋ ಸ್ಪರ್ಧೆ- ಸೀಸನ್ 4

Upayuktha

ಫಿಲೋಮಿನಾದಲ್ಲಿ ರಾಜ್ಯ ಮಟ್ಟದ ಕಾಮರ್ಸ್ ಫೆಸ್ಟ್ ‘ಆ್ಯಂಬಿಯೋರಾ 2020’ ಉದ್ಘಾಟನೆ

Upayuktha