ಜಿಲ್ಲಾ ಸುದ್ದಿಗಳು

ಜನಪದ ವಿದ್ವಾಂಸ ಅಮೃತ ಸೋಮೇಶ್ವರ ಅವರಿಗೆ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ

ಮಂಗಳೂರು: ಕನ್ನಡದ ಹಿರಿಯ ಸಾಹಿತಿ, ಜನಪದ ವಿದ್ವಾಂಸ ಅಮೃತ ಸೋಮೇಶ್ವರ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಲಭಿಸಿದೆ.

ಉಳ್ಳಾಲ ಸಮೀಪದ ಸೋಮೇಶ್ವರ ನಿವಾಸಿಯಾಗಿರುವ 85ರ ಹರೆಯ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡ ಮತ್ತು ತುಳು– ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ.

ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರ. ತುಳು ಭಾಷೆ ಹಾಗೂ ಜಾನಪದದ ಬಗ್ಗೆ ಸಂಶೋಧನೆ ಅವರ ಮತ್ತೊಂದು ಕ್ಷೇತ್ರ. ಇಷ್ಟಲ್ಲದೆ ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಬಗ್ಗೆ ಜನಜಾಗೃತಿಯ ನೆಲೆಯಲ್ಲಿ ಅವರು ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ.

ಭಗವತೀ ಆರಾಧನೆ ಅವರ ಒಂದು ಮಹತ್ವದ ಕೃತಿಯಾಗಿದ್ದು ಅದರಲ್ಲಿ ಕರಾವಳಿ ಕರ್ನಾಟಕ ಹಾಗೂ ಕೇರಳದಲ್ಲಿ ಆರಾಧಿಸಲ್ಪಡುವ ಭಗವತಿ, ಚಾಮುಂಡಿ, ಇತ್ಯಾದಿ ವಿವಿಧ ದೆ„ವಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ವಿದ್ಯುತ್ ಬಿಲ್ ಪಾವತಿಗೆ ಒತ್ತಡ ಬೇಡ: ಮೆಸ್ಕಾಂಗೆ ಸಚಿವರ ಸೂಚನೆ

Upayuktha

ಮಂದಾರ ಕವಿಯ ಮನೆ ಕಣ್ಮರೆಯಾಗದು: ಕೋಟ ಶ್ರೀನಿವಾಸ ಪೂಜಾರಿ

Upayuktha

“ದ್ರೋಣಾಚಾರ್ಯ ಪ್ರಶಸ್ತಿ”ಗೆ ಆಯ್ಕೆಯಾದ ಅಥ್ಲೆಟಿಕ್ಸ್ ಪ್ಲೇಯರ್ ಹೃದಯಾಘಾತದಿಂದ ನಿಧನ

Harshitha Harish