ಮಂಗಳೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜನವರಿ 25ರಂದು ಸಂಜೆ 4 ಗಂಟೆಗೆ ಪ್ರತಿಭಟನೆ ನಡೆಸುವಂತೆ ವಿಶ್ವ ಹಿಂದ್ ಪರಿಷದ್ ಕರೆ ನೀಡಿದೆ.
ಜೆಲ್ಲೆಯಲ್ಲಿ ಆಗುತ್ತಿರುವಂತಹ ಹಲವಾರು ಘಟನೆಗಳಲ್ಲಿ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಕೈವಾಡ ಇದೆ. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸರಕಾರ ಹಾಗೂ ದಕ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಬೆಳ್ತಂಗಡಿಯಲ್ಲಿ ಪಾಕಿಸ್ತಾನ ಪರ ದೇಶವಿರೋಧಿ ಘೋಷಣೆ ಕೇಳಿಬಂದಿದೆ. ಭಾರತ ವಿರೋಧಿ ಪಾಕಿಸ್ತಾನ ದೇಶದ ಪರ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯವರು ಜೈಕಾರ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಕೆಲವೊಂದು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ, ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸುತ್ತಿರುವುದು ಕಂಡು ಬಂದಿದೆ. ಪೊಲೀಸರ ಮೇಲೆ ಕೊಲೆ ಯತ್ನ ನಡೆಸಿ ಆತಂಕ ಮೂಡಿಸಿದ್ದು ಜಿಲ್ಲೆಯಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕೃತ್ಯಗಳನ್ನು ವಿಶ್ವ ಹಿಂದ್ ಪರಿಷದ್ ಖಂಡಿಸುತ್ತದೆ.
ಇಂತಹ ಕೃತ್ಯಗಳನ್ನು ಯಾರೆಲ್ಲ ಮಾಡುತ್ತಿದ್ದಾರೆ ಅವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಪೋಲಿಸರಿಗೆ ವಿಶ್ವ ಹಿಂದ್ ಪರಿಷದ್ ಪತ್ರಿಕಾಗೋಷ್ಥಿಯಲ್ಲಿ ಆಗ್ರಹಿಸಿತು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ