ಪ್ರಮುಖ ರಾಜ್ಯ

ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಸ್ಥಾನ ಪಡೆದ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ

ಬೆಂಗಳೂರು: ಈಗಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರ ಪುತ್ರ ವಿಜಯೇಂದ್ರಗೆ ಬಿಜೆಪಿ ಪಕ್ಷದಲ್ಲಿ ಉಪಾಧ್ಯಕ್ಷ ಪಟ್ಟ ನೀಡಲಾಗಿದೆ.

 

ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕ ಮಾಡಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. ಉಪಾಧ್ಯಕ್ಷರಾಗಿ ವಿಜಯೇಂದ್ರ, ತೇಜಸ್ವಿನಿ ಅನಂತಕುಮಾರ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಅರವಿಂದ ಲಿಂಬಾವಳಿ, ನಿರ್ಮಲಾ ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್ ಅವರನ್ನು ನೇಮಿಸಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ರವಿಕುಮಾರ್, ಮಾಜಿ ಎಂಎಲ್‍ಸಿ ಅಶ್ವಥ್ ನಾರಾಯಣ, ಸಿದ್ದರಾಜು, ಮಹೇಶ್ ಟೆಂಗಿನ ಕಾಯಿ ಅವರಿಗೆ ಹೊಣೆ ನೀಡಲಾಗಿದೆ. ವಕ್ತಾರರಾಗಿ ಗಣೇಶ್ ಕಾರ್ಣಿಕ್‍ರನ್ನು ನೇಮಿಸಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಗೀತಾ ವಿವೇಕಾನಂದ, ಯುವ ಮೋರ್ಚಾದ ಅಧ್ಯಕ್ಷ ಸಂದೀಪ್ ಅವರನ್ನು ನೇಮಿಸಲಾಗಿದೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಪುತ್ರ, ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಇದೀಗ “ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷ” ಸ್ಥಾನದ ಮಹತ್ವದ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹೊರಿಸಲಾಗಿದೆ. ಇದಕ್ಕಾಗಿ ಪಕ್ಷದ ವರಿಷ್ಠ ಮಂಡಳಿಗೆ ನಾನೆಂದೂ ಆಭಾರಿ. ಹಿರಿಯರ ಮಾರ್ಗದರ್ಶನ, ಕಾರ್ಯಕರ್ತರ ಸಹಕಾರ, ಜನರ ಆಶೀರ್ವಾದ ಮಾತ್ರ ನನ್ನ ಮುಂದಿನ ಹೆಜ್ಜೆಗಳಿಗೆ ಯಶಸ್ಸಿನ ಮೆಟ್ಟಿಲಾಗಬಲ್ಲದು ಎಂದು ಬರೆದುಕೊಂಡಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ತಲೆ ನೋವುಗಳ ರಾಜ ಮೈಗ್ರೇನ್: ಕಾರಣವೇನು? ಶಮನ ಹೇಗೆ?

Upayuktha

ಕೋವಿಡ್ 19 ಅಪ್‌ಡೇಟ್ಸ್: ಇನ್ನು ದಿನಕ್ಕೊಂದೇ ಹೆಲ್ತ್ ಬುಲೆಟಿನ್

Upayuktha

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿಜ್ಞಾನ ಮೇಳ

Upayuktha
error: Copying Content is Prohibited !!