ಅಪರಾಧ ಜಿಲ್ಲಾ ಸುದ್ದಿಗಳು

ಕ್ವಾರೆಂಟೈನ್ ಉಲ್ಲಂಘನೆ: ದ.ಕ ಜಿಲ್ಲೆಯಲ್ಲಿ 54 ಪ್ರಕರಣ ದಾಖಲು

ಮಂಗಳೂರು: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿಯ ಮೇಲೆ ಜಿಲ್ಲೆಯಲ್ಲಿ ಕೇಸು ದಾಖಲಾಗಿದೆ.

ಕ್ವಾರೆಂಟೈನ್ ಉಲ್ಲಂಘಿಸಿ ಮನೆಯ ಹೊರಗಡೆ ಸಂಚರಿಸುತ್ತಿರುವುದು ರುಜುವಾದ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಈ ಪೈಕಿ 10 ಪ್ರಕರಣ ಪುತ್ತೂರು ತಾಲೂಕು ಹಾಗೂ ಉಳಿದ ಪ್ರಕರಣಗಳು ಮಂಗಳೂರು ತಾಲೂಕಿಗೆ ಸಂಬಂಧಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ವಾರೆಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಪ್ರತಿಯೊಬ್ಬರ ಮೇಲೂ ನಿಗಾ ಇಡಲಾಗಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿಗಳಲ್ಲದೆ, ಇತರೆ ಇಲಾಖೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಅಕ್ಕಪಕ್ಕದ ಮನೆಯವರಲ್ಲೂ ಕ್ವಾರೆಂಟೈನ್ ಇರುವವರ ಮೇಲೆ ನಿಗಾ ಇಡಲು ತಿಳಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕ್ವಾರೆಂಟೈನ್ ನಿಗಾ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.

ಕ್ವಾರೆಂಟೈನ್ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಎಸ್.ಎಸ್.ಎಲ್.ಸಿ: ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

Upayuktha

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಗ್ರಾಮದಲ್ಲಿ ಜಾನುವಾರು ಭಕ್ಷಕ ವ್ಯಾಘ್ರ ಸೆರೆ

Upayuktha

ಕೊರೊನಾ ಅಪ್ ಡೇಟ್: ದ.ಕ.- 79, ಉಡುಪಿ- 7, ಕರ್ನಾಟಕ- 317

Upayuktha

Leave a Comment