ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ರಾಷ್ಟ್ರದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದ: ಸ್ವಾಮಿ ಪ್ರಕಾಶಾನಂದಜಿ

ಮಂಗಳೂರು: “ಭಾರತದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಪ್ರಾರಂಭಿಸಲು ಪ್ರೇರಣೆ ನೀಡಿದರು. ವ್ಯಕ್ತಿ ನಿರ್ಮಾಣದ ಜೊತೆಯಲ್ಲೇ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ ನಂಬಿದ್ದರು” ಎಂದು ಸ್ವಾಮಿ ಪ್ರಕಾಶಾನಂದಜಿ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರಿನ ಎಸ್. ಡಿ. ಎಂ. ಸ್ನಾತಕೋತ್ತರ ವ್ಯವಹಾರ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ‘ವಿವೇಕ ವಾಣಿ’ ಸರಣಿ ಉಪನ್ಯಾಸ ಕಾರ್ಯಕ್ರಮದ ಮೂರನೇ ಉಪನ್ಯಾಸ ಮಾಲಿಕೆಯಲ್ಲಿ (“ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ”) ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಣೆಬೆನ್ನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜಿ, ಸ್ವಾಮಿ ವಿವೇಕಾನಂದರು ಯುವಕರಿಗೆ ನೀಡಿದ ಸಂದೇಶವನ್ನು ಯುವ ಮನಸ್ಸುಗಳಿಗೆ ತಿಳಿಸಿಯಪಡಿಸಿದರು.

ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಕೆ. ರಮೇಶ್ ಭಾಗವಹಿಸಿದ್ದರು. ವಿಶೇಷ ಅಭ್ಯಾಗತರಾಗಿ ಮಂಗಳೂರಿನ ಎಸ್. ಡಿ. ಎಂ ಸ್ನಾತಕೋತ್ತರ ವ್ಯವಹಾರ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸೀಮಾ ಶೆಣೈ ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ಶ್ರೀಪತಿ ಕಲ್ಲೂರಾಯ ಪಿ. ಸ್ವಾಗತಿಸಿ, ಮಂಗಳೂರು ರಾಮಕೃಷ್ಣ ಮಠದ ಸ್ವಯಂಸೇವಕ ರಂಜನ್ ಬೆಳ್ಳರ್ಪಾಡಿ ವಂದಿಸಿದರು, ರಮ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಸ್ ಎಸ್. ಡಿ. ಎಂ. ಕಾಲೇಜಿನ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಧನಾತ್ಮಕ ಚಿಂತನೆಯತ್ತ ವಿದ್ಯಾರ್ಥಿಗಳ ಚಿತ್ತವಿರಲಿ

Upayuktha

ವಿದ್ಯುತ್ ತಂತಿ ಗೆ ತಗುಲಿದ ವ್ಯಕ್ತಿಯ ಗುರುತು ಪತ್ತೆ

Harshitha Harish

ಭಾರಿ ಮಳೆ: ಆ.7 ರಿಂದ ಉಡುಪಿ ಜಿಲ್ಲಾಡಳಿತದಿಂದ ರೆಡ್ ಅಲರ್ಟ್ ಘೋಷಣೆ

Upayuktha