ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ವೆಬಿನಾರ್

ಮಂಗಳೂರು: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ, ಮಂಗಳೂರು, ಬೆಸೆಂಟ್ ಮಹಿಳಾ ಕಾಲೇಜಿನ ರಾಜ್ಯ ಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಭಾಗ ಮಂಗಳೂರು ಇವರ ಸಹಯೋಗದಲ್ಲಿ ಭಾರತೀಯ ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳ ಮಹತ್ವ (Indian constitution with special focus on citizen’s Duties) ವಿಶೇಷ ವೆಬಿನಾರ್ ಕಾರ್ಯಕ್ರಮವನ್ನು ಶುಕ್ರವಾರ ನಗರದ ಬೆಸೆಂಟ್ ಮಹಿಳಾ ಕಾಲೇಜನಲ್ಲಿ ನಡೆಯಿತು.

ಮಂಗಳೂರು ಕಾಲೇಜು ಶಿಕ್ಷಣ ಇಲಾಖೆ, ಜಂಟಿನಿರ್ದೇಶಕ ಡಾ.ಅಪ್ಪಾಜಿ ಗೌಡ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಸಂವಿಧಾನವು ವಿಶ್ವದ ಶ್ರೇಷ್ಟ ಸಂವಿಧಾನವಾಗಿದ್ದು ಅದರಲ್ಲಿ ತಿಳಿಸಿರುವ ಮೂಲಭೂತ ಕರ್ತವ್ಯಗಳನ್ನು ಕೂಡಾ ನಾವು ಗೌರವಿಸಿ ಆ ಕರ್ತವ್ಯಗಳನ್ನು ಪಾಲಿಸುವುದು ಅವಶ್ಯಕವಾಗಿದೆ ಎಂದರು.

ಗುರುನಾನಕ್ ವಿಶ್ವವಿದ್ಯಾನಿಲಯ, ರಾಜ್ಯಶಾಸ್ತ್ರ ವಿಭಾಗದ, ಮುಖ್ಯಸ್ಥ ಡಾ.ಸತನಾಮ್ ಸಿಂಗ್ ಮಾತನಾಡಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಇರಡು ಮುಖಗಳಿದ್ದಂತೆ ಹಕ್ಕನ್ನು ಅನುಭವಿಸುನ ನಾವು ಕರ್ತವ್ಯವನ್ನು ಮಾಡುವುದು ಕೂಡಾ ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದರು.

ಜವಾಹರಲಾಲ್ ರಾಜಕೀಯ ಮಹಾವಿದ್ಯಾನಿಲಯ, ಪೋರ್ಟ್‍ಬ್ಲೇರ್, ಡಾ.ಶಿರಿಸ್ ಕುಮಾರ್‌ ಅವರು ಸಂವಿಧಾನದ ಪೀಠಿಕೆ ಮತ್ತು ಹಕ್ಕುಗಳ ಬಗ್ಗೆ ತಿಳಿಸಿದರು. ಸಹಾಯಕ ಪ್ರಾಧ್ಯಪಕಿ ರವಿ ಪ್ರಭಾ ಮೂಲಭೂತ ಕರ್ತವ್ಯಗಳ ಬಗ್ಗೆ ವಿವರಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಅಧಿಕಾರಿ ಜಿ. ತುಕರಾಂ ಗೌಡ, ಸಂಯೋಜನಾಧಿಕಾರಿ ರೋಹಿತ್.ಜಿ.ಎಸ್., ಪ್ರಾಂಶುಪಾಲರಾದ ಸತೀಶ್ ಶೆಟ್ಟಿ ಮತ್ತಿತರು ಉಪಸ್ಥಿತರಿದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಸೇನೆಯ ಹೆಸರು ಬಳಸಿಕೊಂಡು ವಂಚಿಸುವವರ ಬಗ್ಗೆ ಎಚ್ಚರವಿರಿ: ಕಾವೂರು ಪೊಲೀಸ್ ಠಾಣೆಯ ಪ್ರಕಟಣೆ

Upayuktha

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ: ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

Upayuktha

ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ 273 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

Upayuktha

Leave a Comment

error: Copying Content is Prohibited !!