ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

‘ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ, ಸಂಶೋಧನಾ ಪ್ರವೃತ್ತಿ ಬೆಳೆಯಲಿ’

ಮಂಗಳೂರು: ಮನುಷ್ಯನಿಗೆ ಸಾವೇ ಇಲ್ಲದಂತೆ ಮಾಡುವ ಬಗ್ಗೆ ಸಂಶೋಧನೆಗಳು ನಡೆಯುತ್ತಿರುವ ಈ ಕಾಲದಲ್ಲಿ, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಪ್ರವೃತ್ತಿ, ಸಂಶೋಧನಾ ಕುತೂಹಲಗಳು ನಿರ್ಣಾಯಕ ಎಂದು ಜೆಎನ್ಸಿಎಎಸ್ಆರ್ ಪ್ರಾಧ್ಯಾಪಕ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ನಿರ್ದೇಶಕ ಡಾ. ಎಸ್.ಎಂ ಶಿವಪ್ರಸಾದ್ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಸಾಯನಶಾಸ್ತ್ರ ವಿಭಾಗ ‘ಸುಪ್ರಾಮೋಲಿಕ್ಯುಲರ್ ಪಾಲಿಮರ್ಸ್’ ಕುರಿತು ಗುರುವಾರ ಏರ್ಪಡಿಸಿದ್ದ ವೆಬಿನಾರ್‌ನಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಬಯೋಟೆಕ್ನಾಲಜಿ, ನ್ಯಾನೋಟೆಕ್ನಾಲಜಿ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಸಂಶೋಧನೆ ಕೈಗೊಂಡು ಭವಿಷ್ಯದ ಜಗತ್ತಿಗೆ ತಮ್ಮ ಕೊಡುಗೆ ನೀಡಬೇಕು, ಎಂದು ಆಶಿಸಿದರು. ಸಂಪನ್ಮೂಲ ವ್ಯಕ್ತಿ ಜೆಎನ್ಸಿಎಎಸ್ಆರ್‌ನ ಪ್ರಾಧ್ಯಾಪಕ ಪ್ರೊ. ಸುಬಿ ಜೇಕಬ್‌ ಜಾರ್ಜ್ ಸುಪ್ರಾಮೋಲಿಕ್ಯುಲರ್ ಪಾಲಿಮರ್ಸ್ ಕ್ಷೇತ್ರದಲ್ಲಿನ ಸಂಶೋಧನೆಗಳಿಂದ ದೊರೆಯುತ್ತಿರುವ ಅವಕಾಶಗಳ ಬಗ್ಗೆ ತಿಳಿಸಿಕೊಟ್ಟರು.

ಉದ್ಘಾಟನಾ ಭಾಷಣ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಔಷಧೋತ್ಪಾದನೆ, ಕೃಷಿ ಮೊದಲಾದೆಡೆ ಉಪಯೋಗವಾಗುವ ಸುಪ್ರಾಮೋಲಿಕ್ಯುಲರ್ ಪಾಲಿಮರ್ಸ್ ಕುರಿತ ಸಂಶೋಧನೆಗೆ ವಿದ್ಯಾರ್ಥಿಗಳು ಆಸಕ್ತಿವಹಿಸಬೇಕು ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕೆ. ರಾಜು ಮೊಗವೀರ, ಕಾಲೇಜಿನ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ ಸಮಾರಂಭಕ್ಕೆ ಶುಭಕೋರಿದರು.

ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಕೆ.ಎಂ ಉಷಾ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಲಕ್ಷ್ಮಣ ಕೆ, ಸಹ ಪ್ರಾಧ್ಯಾಪಕ ಡಾ. ಸಂಜಯ್ ಅಣ್ಣಾರಾವ್, ಕುಮಾರಿ ಮೇಘನಾ ಮೊದಲಾದವರ ನೇತೃತ್ವದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಸಿವಿಎಲ್ ಎಂಜಿನಿಯರ್‌ಗಳಿಗೆ ಸಿಬಿಆರ್‌ಐ ತರಬೇತಿ ಕಾರ್ಯಕ್ರಮ ಫೆ 7-8ಕ್ಕೆ

Upayuktha

ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ಇಲ್ಲ

Upayuktha

ಉಡುಪಿ ಶ್ರೀಕೃಷ್ಣ ಮಠದಲ್ಲಿ ತಪ್ತಮುದ್ರಾ ಧಾರಣೆ

Upayuktha

Leave a Comment

error: Copying Content is Prohibited !!