ನಗರ ಸ್ಥಳೀಯ

ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನ ನೂತನ ಹಾಸ್ಟೆಲ್ ಉದ್ಘಾಟನೆ

ಕಾವೂರು: ಸರಕಾರ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ, ಉಪನ್ಯಾಸಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದರು.

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬೊಂದೇಲ್ ನಲ್ಲಿರುವ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ನೂತನ ವಿದ್ಯಾರ್ಥಿನಿ ನಿಲಯವನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ 1 ಕೋಟಿ ರೂ. ರೂಪಾಯಿ ಅನುದಾನದಲ್ಲಿ ವಿದ್ಯಾರ್ಥಿನಿ ನಿಲಯದ ನೂತನ ಕಟ್ಟಡ ನಿರ್ಮಾಣವಾಗಿದೆ. ಸರಕಾರ ಉಚಿತ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಪ್ರತೀ ವರ್ಷ ಮೀಸಲಿಡುತ್ತದೆ. ಸರಕಾರದ ಅಧೀನದ ಶಾಲೆ, ಕಾಲೇಜು, ಪಾಲಿಟೆಕ್ನಿಕ್‌ಗಳಲ್ಲಿ ಖಾಸಗೀ ರಂಗದ ಶಿಕ್ಷಣಕ್ಕೆ ಸ್ಪರ್ಧೆ ನೀಡುವಷ್ಟರ ಮಟ್ಟಿಗೆ ನಮ್ಮ ಉಪನ್ಯಾಸಕರಲ್ಲಿ ಕೌಶಲ್ಯ ಸಂಪನ್ಮೂಲವಿದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭ ರಾಜ್ಯ ಸರಕಾರದ 1 ಕೋಟಿ 25 ಲಕ್ಷ ರೂಪಾಯಿ ಅನುದಾನದಲ್ಲಿ ವಿದ್ಯಾರ್ಥಿನಿ ನಿಲಯದ ನವೀಕರಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ಕಾರ್ಪೊರೇಟರ್ ಲೋಹಿತ್ ಅಮೀನ್, ಮುಗ್ರೋಡಿ ನಿರ್ಮಾಣ ಸಂಸ್ಥೆಯ ಸಚಿನ್ ಶೆಟ್ಟಿ, ಪ್ರಾಜೆಕ್ಟ್ ಇಂಜಿನಿಯರ್, ಲೋಕೋಪಯೋಗಿ ಇಂಜಿನಿಯರ್, ಪ್ರಾಂಶುಪಾಲರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮೀನು ಮಾರಲು ಹೋಗಿದ್ದ ವ್ಯಕ್ತಿ ನಾಪತ್ತೆ

Upayuktha

ಬದಿಯಡ್ಕ: ಅ.2ಕ್ಕೆ ಯುವ ಕವಯತ್ರಿ ಶ್ವೇತಾ ಕಜೆ ಅವರ ‘ಸತ್ಯೊದ ಮೈಮೆ’ ಕಾದಂಬರಿ ಬಿಡುಗಡೆ

Upayuktha

ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಮಾಸಿಕ ಸಭೆ

Upayuktha