ನಗರ ಸ್ಥಳೀಯ

ದೈಹಿಕ ಶಿಕ್ಷಣ ಶಿಕ್ಷಕರಿಗೆ ಕಾರ್ಯಾಗಾರ, ಪುರಸ್ಕಾರ

ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯದ ವತಿಯಿಂದ ದೈಹಿಕ ಶಿಕ್ಷಕರಿಗೆ ಕಾರ್ಯಾಗಾರ ಮತ್ತು ದ.ಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಮಂಗಳೂರು ತಾಲೂಕು ಪಂಚಾಯತಿನ ಅಧ್ಯಕ್ಷರಾದ ಮೊಹಮ್ಮದ್ ಮೋನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಕೊರೊನ ಸಂಧರ್ಭದಲ್ಲಿ ದೈಹಿಕ ಶಿಕ್ಷಕರು ನೀಡಿದ ಸೇವೆ ಎಲ್ಲಾರಿಗೂ ತಿಳಿದಿರುವಂತದ್ದು, ಎಲ್ಲರು ಮನೆಯಲ್ಲಿದ್ದರೆ ನೀವು ಕೊರೊನಾ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸಿದ್ದಿರಿ, ಅದಷ್ಟು ಬೇಗ ಕೊರೊನ ಮುಕ್ತಗೊಂಡು ಶಾಲೆ ಪ್ರಾರಂಭವಾಗಲಿ ಹಾಗೂ ನಿಮ್ಮ ಸಂಘ ಇನ್ನಷ್ಟು ಎತ್ತರಕ್ಕೆ ಬೆಳಯಲಿ ಎಂದು ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣಾಧಿಕಾರಿ ರಾಜಲಕ್ಷ್ಮೀಯವರು ಅಧ್ಯಕ್ಷತೆ ವಹಿಸಿ ಉತ್ತಮವಾದ ಸೇವೆಗೆ ಈ ಪ್ರಶಸ್ತಿ ಸಿಕ್ಕಿದೆ ನಿಮಗೆ ಅಭಿನಂದನೆಗಳು, ಕೊರೊನ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸಿ ದೈಹಿಕ ಶಿಕ್ಷಕರು ಯಾವುದೇ ಕೆಲಸ ಹೇಳಿದರು ಮಾಡುತ್ತಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಿರಿ ಎಂದು ಈ ಸೇವೆಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ವಿಶೇಷ ಪ್ರಶಸ್ತಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರ್ ಕಡ್ತಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶ್ರೀಮತಿ ಜಯಶ್ರೀ ಪ್ರತೀಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಕೊರೊನ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಧನಲಕ್ಷ್ಮಿ ಗಟ್ಟಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ದೈಹಿಕ ಶಿಕ್ಷಕರ ಸೇವೆ ಮಹತ್ವವಾದುದು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ಕೊರೊನ ಹಚ್ಚಗಿರುವ ಸಂದರ್ಭದಲ್ಲಿ ಮಕ್ಕಳ ಯೋಗಕ್ಷೇಮವನ್ನು ನೋಡಿ ತಮ್ಮ ಬಗೆ ಚಿಂತಿಸದೆ ಯಶಸ್ವಿಯಾಗಿ ಪರೀಕ್ಷೆ ನಡೆಸಿಕೊಟ್ಟ ಹಿರಿಮೆ ದೈಹಿಕ ಶಿಕ್ಷಕರಿಗೆ ಸಲ್ಲಬೇಕು ಎಂದು ಶುಭಾ ಹಾರೈಸಿದರು.

ಅಥಿತಿಗಳಾಗಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ‌ ಉಪ ನಿರ್ದೇಶಕರಾದ ಪ್ರದೀಪ್ ಡಿ ಸೋಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿಯಾದ ವಿಷ್ಣು ನಾರಾಯಣ ಹೆಬ್ಬಾರ್, ಸೈಂಟ್‌ ಆಗ್ನೆಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೀಟಾ ಮೆಟಾಲ್ಡಾ ಪಿಂಟೊ, ದಕ್ಷಿಣ ಕನ್ನಡ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರಿಮತಿ ಲಿಲ್ಲಿ ಪಾಯಸ್ ದಕ್ಷಿಣ ಕನ್ನಡ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜೊತೆ ಕಾರ್ಯದರ್ಶಿ ಡೊನಾಲ್ಡ್ ಲೋಬೊ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ತ್ಯಾಗಂ ಹರೆಕಳ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಲೆನ್ಸೀ ಸಿಕ್ವೇರ ವಂದಿಸಿದರು, ವಿನ್ಸೆಂಟ್ ಕಾರ್ಯಕ್ರಮ ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

‘ಸುಳ್ಳಿನ ಪ್ರಸರಣ ನಿಯಂತ್ರಣಕ್ಕೆ ಸ್ಪಷ್ಟ ನೀತಿ ಅಗತ್ಯ’

Upayuktha

ಮಂಗಳೂರು ಮಹಾನಗರ ಪಾಲಿಕೆ ಸೇರಿ 14 ಸ್ಥಳೀಯಾಡಳಿತ ಸಂಸ್ಥೆಗಳಿಗೆ ನ. 12ಕ್ಕೆ ಚುನಾವಣೆ

Upayuktha

ಹೆಬ್ರಿಯ ಗಿಲ್ಲಾಳಿಯಲ್ಲಿ ಪೇಜಾವರ ಮಠದ ನಾಲ್ಕನೇ ಗೋಶಾಲೆಗೆ ಸಿದ್ಧತೆ

Upayuktha